ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಚಳ್ಳಕೆರೆ: ಸಿಡಿಲು ಬಡಿದು ವ್ಯಕ್ತಿ ಸಾವು

Srinivasa Murthy VN
Updated On : 17 Sept 2013, 11:06 am

ಬೆಂಗಳೂರು: ಕಳೆದೊಂದು ವಾರದಿಂದ ಧಾರಾಕಾರದಿಂದ ಸುರಿಯುತ್ತಿರುವ ಮಳೆ ಸೋಮವಾರ ಕೊಂಚ ಬಿಡುವು ನೀಡಿದ್ದರೂ, ಕೆಲವೆಡೆ ಉತ್ತಮ ಮಳೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ಸಿಡಿಲಿಗೆ ಮೃತಪಟ್ಟಿದ್ದಾನೆ.
ಚಳ್ಳಕೆರೆ ತಾಲೂಕಿನ ಸಾಣೀಕೆರೆ ಗ್ರಾಪಂ ವ್ಯಾಪ್ತಿಯ ಕಾಪರಹಳ್ಳಿಯ ಬಳಿ ಕುರಿ ಮೇಯಿಸಲು ಹೋಗಿದ್ದ ರಂಗಪ್ಪ (55) ಮೃತಪಟ್ಟವನು. ಇದೇ ಸಂದರ್ಭದಲ್ಲಿ ಮತ್ತೊಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

20 ಲಕ್ಷ ಮೌಲ್ಯದ ಬೆಳೆ ನಷ್ಟ:
ಬಳ್ಳಾರಿ ಜಿಲ್ಲೆಯ ಕೊಟ್ಟೂರು ಸಮೀಪದ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದ ಸಮೀಪದ ಹಿರೇವಡೇರವಳ್ಳಿ ಹೊಲಗಳು ಸಂಪೂರ್ಣ ಜಲಾವೃತಗೊಂಡಿವೆ. ರೈತರ 30 ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಹತ್ತಿ, ರಾಗಿ, ಮೆಕ್ಕೆಜೋಳ, ಈರುಳ್ಳಿ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ಬೆಳೆ ನಷ್ಟವಾಗಿದೆ.  ಭಾರಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರು ಸಮೀಪದ ಹಿರೇವಡೇರಹಳ್ಳಿ-ಮೂರ್ತಿನಾಯಕನಹಳ್ಳಿ ಸಂಪರ್ಕ ರಸ್ತೆ ಸಂಪೂರ್ಣ ಜರ್ಖಗೊಂಡಿದೆ. ತುಮಕೂರು ಜಿಲ್ಲೆಯ ಗುಬ್ಬಿ, ಚಿಕ್ಕನಾಯಕನಹಳ್ಳಿ ಹಾಗೂ ಗುಲ್ಬರ್ಗ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿಯೂ ಉತ್ತಮ ಮಳೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement