ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಘೋಷಿಸಿ
ನವದೆಹಲಿ: ವೀರಶೈವ ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮ ಎಂದು ಪರಿಗಣಿಸಬೇಕು ಮತ್ತು ವಿಶೇಷ ಸ್ಥಾನ ಮಾನ ನೀಡಬೇಕು ಎಂದು ರಾಜ್ಯ ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ನೇತೃತ್ವದ ನಿಯೋಗ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಮತ್ತು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ರೆಹಮಾನ್ ಖಾನ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ನಿಯೋಗವು, ವೀರಶೈವ ಪ್ರತ್ಯೇಕ ಧರ್ಮವಾಗಿದ್ದು, ಅದಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಮತ್ತು ಅಲ್ಪಸಂಖ್ಯಾತರ ಪಟ್ಟಿಗೆ ವೀರಶೈವರನ್ನು ಸೇರಿಸಬೇಕು ಎಂದು ಮನವಿ ಮಾಡಿದೆ. ಶೈಕ್ಷಣಿಕ, ಉದ್ಯೋಗ ಮೀಸಲಾತಿ ಸೇರಿ ಅಲ್ಪಸಂಖ್ಯಾತರಿಗೆ ನೀಡುವ ಸೌಲಭ್ಯ ಒದಗಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೋರಿದೆ. ನಿಯೋಗವು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದೆ. ಕಾಂಗ್ರೆಸ್ ಮುಖಂಡರಾದ ಭೀಮಣ್ಣ ಖಂಡ್ರೆ, ಕೆ.ಸಿ. ಕೊಂಡಯ್ಯ, ಆರ್.ಎಸ್. ಪಾಟೀಲ್, ಈಶ್ವರ ಖಂಡ್ರೆ ಮತ್ತಿತರರು ಇದ್ದರು.
- ಕನ್ನಡಪ್ರಭ ಪ್ರತಿನಿಧಿಯಿಂದ