ಆರ್ಎಸ್ಎಸ್ ಕಾರ್ಯಕ್ಕೆ ಶ್ಲಾಘನೆ
ಕಾಂಗ್ರೆಸ್ನ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಬೆಂಗಳೂರಿನಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಆರ್ಎಸ್ಎಸ್...
ಬೆಂಗಳೂರು: ಕಾಂಗ್ರೆಸ್ನ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಬೆಂಗಳೂರಿನಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಆರ್ಎಸ್ಎಸ್ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಪ್ರಚಾರದಲ್ಲಿ ಭಾಗವಹಿಸಿದ್ದ ಅವರು ಬುಧವಾರ ಈ ಹೇಳಿಕೆ ನೀಡಿದರು. ಚುನಾವಣೆ ಸಂದರ್ಭದಲ್ಲಿ ತನ್ನ ಮತದಾರರನ್ನು ಸೆಳೆಯಲು ಆರ್ಎಸ್ಎಸ್ ಅನುಸರಿಸುತ್ತಿರುವ ಮಾರ್ಗವನ್ನು ನಾವು ಕಲಿತುಕೊಳ್ಳಬೇಕು. ನಿಚ್ಚಳವಾಗಿ ಯಾರು ಬಿಜೆಪಿಗೆ ಮತ ಹಾಕುತ್ತಾರೆ ಎಂಬುದನ್ನು ಗುರುತಿಸುವ ಆರ್ಎಸ್ಎಸ್, ಅವರನ್ನು ಮತಗಟ್ಟೆಗೆ ಕರೆತರುವಲ್ಲಿ ಯಶಸ್ವಿಯಾಗುತ್ತದೆ. ಆದರೆ ನಾವು ಈ ನಿಟ್ಟಿನಲ್ಲಿ ವಿಫಲರಾಗಿದ್ದೇವೆ. ಹೀಗಾಗಿ ಈ ಚುನಾವಣೆಯಲ್ಲಿ ನಮ್ಮ ಮತದಾರರನ್ನು ಗುರುತಿಸಿ ಮತಗಟ್ಟೆಗೆ ತರುವ ಪ್ರಯತ್ನ ನಡೆಯಬೇಕು ಎಂದು ಹೇಳಿದರು.