ಮುಖ್ಯಮಂತ್ರಿ ಕ್ಷಮೆ ಕೇಳಲಿ
ಬೆಳಗಾವಿ ರೈತ ವಿಠಲ ಅರಭಾವಿ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಆತ ಚೆನ್ನಾಗಿ ಕುಡಿದಿದ್ದ, ಸತ್ತ' ...
ಬೆಂಗಳೂರು: 'ಬೆಳಗಾವಿ ರೈತ ವಿಠಲ ಅರಭಾವಿ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಆತ ಚೆನ್ನಾಗಿ ಕುಡಿದಿದ್ದ, ಸತ್ತ' ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
ಬುಧವಾರ ರಾತ್ರಿ ಮೈಸೂರು- ಮಡಿಕೇರಿ ಕ್ಷೇತ್ರದ ನಾಪೋಕ್ಲುವಿನಲ್ಲಿ ನೀಡಿದ್ದ ಈ ಹೇಳಿಕೆ ಬಿಜೆಪಿ, ಜೆಡಿಎಸ್, ರೈತ ಮುಖಂಡರು ಸೇರಿದಂತೆ ಹಲವಾರು ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದು, ರಾಜ್ಯದ ಅಲ್ಲಲ್ಲಿ ಪ್ರತಿಭಟನೆಗಳೂ ನಡೆದಿವೆ.
ಬೆಳಗಾವಿಯಲ್ಲಿ ರೈತ ಸಂಘಟನೆಗಳು ಬೀದಿಗಿಳಿದು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಅವರ ಪ್ರತಿಕೃತಿ ದಹಿಸಿ, ಶವಯಾತ್ರೆ ನಡೆಸಿವೆ. ಈ ಬೇಜವಾಬ್ದಾರಿ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಗಡುವು ನೀಡಿವೆ. ರೈತ ವಿಠಲ ಅರಭಾವಿಯ ಪುತ್ರ ಭೀಮಪ್ಪ ಅರಬಾವಿ ಹಾಗೂ ಹಲವಾರು ರೈತ ಮುಖಂಡರು ಹೋರಾಟದ ನೇತೃತ್ವ ವಹಿಸಿದ್ದಾರೆ.
ಪ್ರಶ್ನೆಗಳು: ಒಂದು ವೇಳೆ ವಿಠಲ ಅರಭಾವಿ ಮದ್ಯದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರೆ ಸರ್ಕಾರ 10 ಲಕ್ಷ ರುಪಾಯಿ ಪರಿಹಾರ ಯಾಕೆ ಘೋಷಿಸಿದೆ? ಮದ್ಯದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದನ್ನು ನಿರೂಪಿಸಲು ಸರ್ಕಾರದ ಬಳಿ ಪುರಾವೆ, ಸಾಕ್ಷಿಗಳಿವೆಯೇ? ಸರ್ಕಾರವೇ ನೇಮಿಸಿದ ಧಾರವಾಡ ಜಿಲ್ಲಾಧಿಕಾರಿ ನೇತೃತ್ವದ ಮ್ಯಾಜಿಸ್ಟ್ರೇಟ್ ತನಿಖೆಯ ವರದಿ ಸರ್ಕಾರದ ಕೈಸೇರಿ ಎರಡೂವರೆ ತಿಂಗಳಾದರೂ ಸರ್ಕಾರ ಅದನ್ನು ಯಾಕೆ ಬಹಿರಂಗಪಡಿಸಿಲ್ಲ. ಈ ವರದಿಯಲ್ಲಿ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಮದ್ಯದ ಅಮಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಏನಾದರೂ ಇದೆಯೇ? ಸರ್ಕಾರ ವರದಿ ಬಹಿರಂಗಪಡಿಸಲು ಮೀನಮೇಷ ಎಣಿಸುತ್ತಿರುವುದು ಯಾಕೆ? ಎಂಬ ಪ್ರಶ್ನೆಯನ್ನು ರೈತರು ಮುಂದಿಟ್ಟಿದ್ದಾರೆ.
ಬೆಳಗಾವಿಯಲ್ಲಿ ದಿನವಿಡೀ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಯ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿದರು. ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರಿಗೆ ಘೇರಾವ್ ಹಾಕಿದರು.
ಬಾಗಲಕೋಟೆ, ಚಾಮರಾಜನಗರ, ಮೈಸೂರು, ಉತ್ತರಕರ್ನಾಟಕದ ಹಲವೆಡೆ ಮುಖ್ಯಮಂತ್ರಿಗಳ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಹಲವೆಡೆ ಪ್ರತಿಭಟನೆಗಳೂ ನಡೆದಿವೆ. ಬೆಳಗಾವಿಯಲ್ಲಿ ದಿನವಿಡೀ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಯ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿದರು. ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರಿಗೆ ಘೇರಾವ್ ಹಾಕಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿ ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಕೂಡಲೇ ತಮ್ಮ ಹೇಳಿಕೆ ಹಿಂದಕ್ಕೆ ಪಡೆದು, ರೈತ ಸಮುದಾಯದ ಕ್ಷಮೆ ಯಾಚಿಸಬೇಕು.
ಟಿ ಟಿ.ಟಿ. ಮುರಕಟ್ನಾಳ,
ರೈತ ಮುಖಂಡ
ಪ್ರಸಕ್ತ ಸನ್ನಿವೇಶದಲ್ಲಿ ರೈತ ವಿಠಲ ಅರಬಾವಿ ಆತ್ಮಹತ್ಯೆ ಪ್ರಕರಣ ಅಪ್ರಸ್ತುತ. ಪ್ರಕರಣದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿಯಿಂದ ಹೇಳಿಕೆ ನೀಡಿದ್ದಾರೆ. ರೈತರನ್ನು ಅವಮಾನ ಮಾಡಿದ್ದಾರೆ.
ಟಿ ಅಶೋಕ ಪೂಜಾರಿ, ರೈತ ಮುಖಂಡ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ