ಸಮೀಕ್ಷೆಗಳಿಗೆ ನಿರ್ಬಂಧ
ಸೋಮವಾರ ಲೋಕಸಭಾ ಚುನಾವಣೆ ಮತದಾನ ಆರಂಭವಾಗುವ ಹಿನ್ನೆಲೆಯಲ್ಲಿ ಮತಗಟ್ಟೆ...
ಬೆಂಗಳೂರು: ಸೋಮವಾರ ಲೋಕಸಭಾ ಚುನಾವಣೆ ಮತದಾನ ಆರಂಭವಾಗುವ ಹಿನ್ನೆಲೆಯಲ್ಲಿ ಮತಗಟ್ಟೆ ಸಮೀಕ್ಷೆಗಳನ್ನು ಪ್ರಕಟಿಸದಂತೆ ಚುನಾವಣಾ ಆಯೋಗ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ.
ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯದಲ್ಲೂ ಸೋಮವಾರದಿಂದ ಸಮೀಕ್ಷೆಗಳನ್ನು ಪ್ರಕಟಿಸದಂತೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಶನಿವಾರ ಮನವಿ ಮಾಡಿದ್ದಾರೆ.
ಈ ವಿಷಯ ತಿಳಿಸಿದ ಅವರು, ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳ ಜತೆಗೆ ಸಾಮಾಜಿಕ ಜಾಲ ತಾಣಗಳಿಗೂ ಈ ನಿಬಂಧನೆ ಅನ್ವಯವಾಗುತ್ತದೆ. ಮೀರಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದಿದ್ದಾರೆ.