ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ನಿಲ್ಲದ ಸಾಹಿತಿಗಳ 'ರಾಜಕೀಯ'

Mainashree
Updated On : 6 Apr 2014, 11:13 am

ಬೆಂಗಳೂರು: ಸಾಹಿತಿಗಳ 'ರಾಜಕೀಯ' ಸಮರ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಾಂಗ್ರೆಸ್, ಬಿಜೆಪಿ ಎಂದು ಇಬ್ಬಣಗಳಲ್ಲಿ ಸಾಹಿತಿಗಳು ಗುರುತಿಸಿಕೊಂಡ ಬಳಿಕ ಇದೇ ವಿಚಾರವಾಗಿ ಉಭಯ ಪಕ್ಷಗಳ ನಡುವೆ ವಾಗ್ಯುದ್ದ ಶುರುವಾಗಿದೆ.
ಗುಲ್ಬರ್ಗದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಕೇಂದ್ರ ಸರ್ಕಾರದಿಂದ ಸಂಬಳ ಪಡೆಯುವ ಡಾ.ಯು.ಆರ್.ಅನಂತಮೂರ್ತಿ ಅವರು ಕಾಂಗ್ರೆಸ್ ಋಣ ತೀರಿಸಲು ಆ ಪಕ್ಷದ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ದಾವಣಗೆರೆಯಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಬೆಂಗಳೂರಿನಲ್ಲಿ ಹಾಗೂ ಜಗದೀಶ ಶೆಟ್ಟರ್ ಧಾರವಾಡದಲ್ಲಿ ಅನಂತಮೂರ್ತಿ ವಿರುದ್ಧ ಇದೇ ಅಂಶ ಮುಂದಿಟ್ಟುಕೊಂಡು ವಾಕ್‌ಪ್ರಹಾರ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement