ಕಾಂಗ್ರೆಸ್ಗೆ ಜಾಫರ್ ಷರೀಫ್ ರಾಜಿನಾಮೆ
ಕಾಂಗ್ರೆಸ್ಗೆ ನಾನು ಅಧಿಕೃತವಾಗಿ ರಾಜಿನಾಮೆ ನೀಡಿದ್ದೇನೆ, ಆದರೆ..
ಬೆಂಗಳೂರು: ಕಾಂಗ್ರೆಸ್ಗೆ ನಾನು ಅಧಿಕೃತವಾಗಿ ರಾಜಿನಾಮೆ ನೀಡಿದ್ದೇನೆ, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ವಿರುದ್ಧ ಯಾವುದೇ ಪತ್ರ ಬರೆದಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಷರೀಫ್ ಹೇಳಿದ್ದಾರೆ. ಬೆಂಗಳೂರಿಗೆ ವಾಪಸ್ ಆಗಿರುವ ಅವರು ಸುದ್ದಿಗಾರರಿಗೆ ಮಂಗಳವಾರ ಈ ವಿಷಯ ತಿಳಿಸಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರಿಗೆ ಪತ್ರ ಕಳುಹಿಸಿಕೊಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.