ಮೋದಿ ಇಂದು, ರಾಗಾ 12ಕ್ಕೆ ನಾಮಪತ್ರ
ವಡೋದರಾದಿಂದ ಬಿಜೆಪಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಬುಧವಾರ ನಾಮಪತ್ರ..
ವಡೋದರಾದಿಂದ ಬಿಜೆಪಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ. ಅಮೇಠಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಾಹುಲ್ ಗಾಂಧಿ ಶನಿವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಿಯಾಂಕಾ ವಾದ್ರಾ ರಾಹುಲ್ಗೆ ಸಾಥ್ ನೀಡಲಿದ್ದಾರೆ. ರಾಹುಲ್ 2 ಬಾರಿ ಇದೇ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.