ರಾಜ್ಯದಲ್ಲಿಂದು ಸೋನಿಯಾ ಗಾಂಧಿ ಪ್ರಚಾರ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ..
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11ಕ್ಕೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಜತೆ ಕೆಲ ಸಮಯ ಚರ್ಚೆ ನಡೆಸುವರು. ನಂತರ ಮ. 12 ಗಂಟೆಗೆ ಕೋಲಾರದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುವರು. ಮ. 2 ಗಂಟೆಗೆ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್. ವಿಶ್ವನಾಥ್ ಪರ ಪ್ರಚಾರ ನಡೆಸಲಿದ್ದಾರೆ.