ನಕ್ಸಲ್‌ಗೆ 14 ಬಲಿ
ನವದೆಹಲಿ: ಛತ್ತೀಸ್‌ಗಡದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರು ಶನಿವಾರ ನಡೆಸಿದ ಎರಡು ಪ್ರತ್ಯೇಕ ದಾಳಿಯಲ್ಲಿ ಏಳು ಮಂದಿ ಚುನಾವಣಾ ಸಿಬ್ಬಂದಿ ಹಾಗೂ ಐವರು ಸಿಆರ್‌ಪಿಎಫ್ ಸಿಬ್ಬಂದಿ ಸೇರಿ ಒಟ್ಟು 14 ಮಂದಿ ಬಲಿಯಾಗಿದ್ದಾರೆ. ಘಟನೆಯಲ್ಲಿ ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದಾರೆ.ಎರಡು ದಿನಗಳ ಹಿಂದಷ್ಟೇ ಈ ಪ್ರದೇಶದಲ್ಲಿ ಚುನಾವಣೆ ನಡೆದಿತ್ತು.