ಮುಸ್ಲಿಮರಿಗೆ ಪ್ರತ್ಯೇಕ ಮನವಿ ಇಲ್ಲ
ನಾನು ಉಳಿದ ನಾಯಕರಂತಲ್ಲ. ವೋಟಿಗಾಗಿ ಮುಸ್ಲಿಮರಿಗೆ ಪ್ರತ್ಯೇಕ ಮನವಿ ಮಾಡುವುದಿಲ್ಲ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿ: ನಾನು ಉಳಿದ ನಾಯಕರಂತಲ್ಲ. ವೋಟಿಗಾಗಿ ಮುಸ್ಲಿಮರಿಗೆ ಪ್ರತ್ಯೇಕ ಮನವಿ ಮಾಡುವುದಿಲ್ಲ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ನಿರ್ದಿಷ್ಟ ಸಮುದಾಯವೊಂದಕ್ಕೆ ಅಂದರೆ ಹಿಂದೂ ಅಥವಾ ಮುಸ್ಲಿಮರಿಗೆ ನೀವು ಇದೇ ಪಕ್ಷಕ್ಕೆ ಮತ ನೀಡಬೇಕು ಎಂದು ಕೇಳುವಂಥ ಪಾಪ ಮಾಡುವುದಿಲ್ಲ. ಮತ ಹಾಕುವಂತೆ ನನ್ನ ಸಹದೇಶವಾಸಿಗಳಿಗೆ ಕೇಳಿಕೊಳ್ಳುತ್ತೇನೆ. ಉಳಿದ ನಿರ್ಧಾರವನ್ನು ಅವರೇ ತೆಗೆದುಕೊಳ್ಳುತ್ತಾರೆ ಎಂದು ಸಂದರ್ಶನದಲ್ಲಿ ಮೋದಿ ಹೇಳಿದ್ದಾರೆ.
ನಾನೇನಾದರೂ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಒಂದು ವೇಳೆ ನನ್ನ ವಿರುದ್ಧವೂ ಆರೋಪ ಕೇಳಿ ಬಂದರೆ ತನಿಖೆ ಎದುರಿಸಲು ಸಿದ್ಧನಿದ್ದೇನೆ.
-ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ