ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಅನಂತನಿಗೆ ಆಡಿಟಿಂಗ್

ಕೇರಳದ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಸ್ತಿಯನ್ನು ನಿವೃತ್ತ ಮಹಾಲೇಖಪಾಲ...

Mainashree
Updated On : 24 Apr 2014, 9:57 am

ನವದೆಹಲಿ: ಕೇರಳದ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಸ್ತಿಯನ್ನು ನಿವೃತ್ತ ಮಹಾಲೇಖಪಾಲ ವಿನೋದ್ ರಾಯ್ ಮೇಲ್ವಿಚಾರಣೆಯಲ್ಲಿ ಆಡಿಟ್ ಮಾಡಲು ಸುಪ್ರೀಂಕೋರ್ಟ್ ಗುರುವಾರ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ದೇವಸ್ಥಾನದ ಈಗಿನ ಆಡಳಿತ ಮಂಡಳಿ ಕುರಿತು ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತಿರುವನಂತಪುರ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಹೊಸ ಆಡಳಿತಾತ್ಮಕ ಸಮಿತಿಯನ್ನೂ ರಚಿಸಿ ನ್ಯಾ. ಆರ್.ಎಂ. ಲೋಧಾ ಮತ್ತು ನ್ಯಾ. ಎ.ಕೆ. ಪಟ್ನಾಯಕ್ ಅವರಿದ್ದ ಪೀಠ ಆದೇಶ ನೀಡಿದೆ. ಸದ್ಯ ದೇವಸ್ಥಾನದ ಆಡಳಿತ ನಿರ್ವಹಣೆ ನೋಡಿಕೊಳ್ಳುತ್ತಿರುವ ಟ್ರಸ್ಟ್ ತನ್ನ ಕಾರ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಹಾಗಾಗಿ ಈ ಟ್ರಸ್ಟ್ ಅನ್ನು ಬದಲಾಯಿಸುವ ಅಗತ್ಯವಿದೆ. ಒಂದು ವೇಳೆ ಅದೇ ವ್ಯಕ್ತಿಗಳನ್ನು ಟ್ರಸ್ಟಿಗಳಾಗಿ ಮುಂದುವರಿಸಿದರೆ ಈ ದೇವಸ್ಥಾನವನ್ನು ಭಗವಂತನೇ ಕಾಪಾಡಬೇಕು ಎಂದು ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement