ರಾಮದೇವ್ ವಿಷಾದ
ಲಖನೌ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದಲಿತರ ಮನೆಗೆ ಹೋಗೋದು ಹನಿಮೂನ್‌ಗೆ ಎನ್ನುವ ಯೋಗಗುರು ರಾಮದೇವ್ ಹೇಳಿಕೆ ಹೊಸ ವಿವಾದದ ಕಿಡಿ ಹೊತ್ತಿಸಿದೆ. ರಾಮದೇವ್ ವಿರುದ್ಧ ಉತ್ತರಪ್ರದೇಶ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ಈ ನಡುವೆ, ತಮ್ಮ ಹೇಳಿಕೆಗೆ ದೇಶಾದ್ಯಂತ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದಂತೆ ರಾಮದೇವ್ ಮತ್ತೊಮ್ಮೆ ವಿಷಾದ ವ್ಯಕ್ತಪಡಿಸಿದ್ದಾರೆ. ಜತೆಗೆ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ರಾಹುಲ್‌ಗಾಂಧಿಗಾಗಲಿ, ದಲಿತರಿಗಾಗಲಿ ಅವಮಾನ ಮಾಡುವ ಯಾವುದೇ ಉದ್ದೇಶ ಇಲ್ಲ ಎಂದಿದ್ದಾರೆ ರಾಮದೇವ್.
ರಾಮದೇವ್ ಹೇಳಿಕೆಗೆ ಕಾಂಗ್ರೆಸ್‌ನಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದೊಂದು ದಲಿತ ವಿರೋಧಿ ಹೇಳಿಕೆ. ಈ ಕುರಿತು ಮೋದಿ ಹಾಗೂ ಬಿಜೆಪಿ ಸ್ಪಷ್ಟನೆ ನೀಡಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಎಂ ಕೂಡ ಇದೊಂದು ಅನಾಗರಿಕ ಹೇಳಿಕೆ ಎಂದಿದೆ.