ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಹಿಪ್ಪರಗಿ ಡ್ಯಾಂನಿಂದ ನೀರು ಬಿಡಲ್ಲ

Mainashree
Updated On : 28 Apr 2014, 10:59 am

ಜಮಖಂಡಿ: ತಾಲೂಕಿನ ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವುದು ಅಸಾಧ್ಯ ಎಂದು ಶಾಸಕ ಸಿದ್ದು ನ್ಯಾಮಗೌಡ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಪಾಟೀಲ ಅವರು ಹಿಪ್ಪರಗಿ ಬ್ಯಾರೇಜ್‌ನಲ್ಲಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲದೆ ಮಂಗಳವಾರ 0.6 ಟಿಎಂಸಿ ನೀರು ಬಿಡಿಸುವುದಾಗಿ ಹೇಳಿರಬಹುದು. ಆದರೆ ಸದ್ಯ ಹಿಪ್ಪರಗಿ ಬ್ಯಾರೇಜ್‌ನಲ್ಲಿ ಸಂಗ್ರಹವಿರುವ ನೀರು ಜಮಖಂಡಿ-ರಬಕವಿ-ಬನಹಟ್ಟಿ ಶಹರದ ಜನರಿಗೆ ಕುಡಿವ ನೀರಿಗಾಗಿ ಕಾಯ್ದಿರಿಸಲಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಿದೆ ಮತ್ತು ಮಹಾರಾಷ್ಟ್ರದ ಸಿಎಂ ಮತ್ತೊಂದು ರಾಜ್ಯದ ಉಸ್ತುವಾರಿ ವಹಿಸಿಕೊಂಡಿರುವುದರಿಂದ ಕೊಯ್ನಾ ನೀರು ಬಿಡಿಸುವ ಕುರಿತು ಮಾತುಕತೆ ನಡೆಸಲು ಸಾಧ್ಯವಾಗಿಲ್ಲ. ಏ.29ರಂದು ರಾಜ್ಯದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಮುಂಬೈಗೆ ತೆರಳಿ ಕೊಯ್ನಾ ಜಲಾಶಯದಿಂದ ನೀರು ಬಿಡಿಸುವ ಬಗ್ಗೆ ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ತಕ್ಷಣ ಕೊಯ್ನಾ ಅಣೆಕಟ್ಟೆಯಂದ ನೀರು ಬಿಡಿಸಲು ಪ್ರಯತ್ನ ಮಾಡುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement