ಸೇವಾ ಮಂಡಳಿ ರಚನೆಯಲ್ಲಿ ಪ್ರಮಾದ: ಮುಖ್ಯಮಂತ್ರಿ ಬಳಿ ಸಿಎಸ್ ನಿವೇದನೆ
ಬೆಂಗಳೂರು: ಐಎಎಸ್, ಐಎಫ್‌ಎಸ್ ಅಧಿಕಾರಿಗಳ ಸೇವಾ ಮಂಡಳಿ ರಚನೆ ವಿಚಾರದಲ್ಲಿ ಪ್ರಮಾದವಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿವೇದಿಸಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವರಣೆ ನೀಡಿರುವ ಅವರು, ಅಧಿಕಾರಿಗಳ ವರ್ಗಾವಣೆ ಅವಧಿ ನಿಗದಿ ವಿಚಾರವನ್ನು ಪುನರ್ ಪರಿಶೀಲಿಸುವ ಭರವಸೆ ನೀಡಿದ್ದಾರೆ. ಸರ್ಕಾರದ ಗಮನಕ್ಕೆ ತರದೇ ಹೈಕೋರ್ಟ್‌ನಲ್ಲಿ ಅಭಿಪ್ರಾಯ ಮಂಡಿಸಿದ ಕಾರಣಕ್ಕೆ ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಸಂಜೀವ್ ಕುಮಾರ್ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ.