ವರ್ಷಾಘಾತಕ್ಕೆ ಮಹಿಳೆ ಸಾವು
ರಾಜ್ಯದ ಹಲವೆಡೆ ಶುಕ್ರವಾರವೂ ಭರ್ಜರಿ ಮಳೆ ಮುಂದುವರಿದಿದೆ. ಹುಬ್ಬಳ್ಳಿಯಲ್ಲಿ ಮನೆಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು: ರಾಜ್ಯದ ಹಲವೆಡೆ ಶುಕ್ರವಾರವೂ ಭರ್ಜರಿ ಮಳೆ ಮುಂದುವರಿದಿದೆ. ಹುಬ್ಬಳ್ಳಿಯಲ್ಲಿ ಮನೆಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಬಳಿಯ ಕುಮಾರಧಾರಾ ಸೇತುವೆ ಮುಳುಗಡೆಯಾಗಿದೆ. ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣಕನ್ನಡ, ಕೊಡಗು, ಉಡುಪಿ, ಬೆಳಗಾವಿ, ಉತ್ತರಕನ್ನಡ, ಧಾರವಾಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿದಿದೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ಮನೆ ಗೋಡೆ ಕುಸಿದು, ಪಾರವ್ವದೇವಪ್ಪ ನರ್ತಿ(60) ಅಸುನೀಗಿದರು. ಮಕ್ಕಳಾದ ನಿಂಗವ್ವ, ಹನುಮಪ್ಪ ಗಾಯಗೊಂಡಿದ್ದಾರೆ. ಹಳೆಹುಬ್ಬಳ್ಳಿ ಹಾಗೂ ಚನ್ನಪೇಟೆಯ ಎರಡು ಮನೆಗಳ ಗೋಡೆಯ ಪಾರ್ಶ್ವ ಬಿದ್ದಿದೆ.