ಸಿಂಡಿಕೇಟ್ ಬ್ಯಾಂಕ್ ಅಧ್ಯಕ್ಷರ ಸೆರೆ
ಲಂಚ ಪ್ರಕರಣ ಸಂಬಂಧ ಸಿಂಡಿಕೇಟ್ ಬ್ಯಾಂಕ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ..
ಬೆಂಗಳೂರು: ಲಂಚ ಪ್ರಕರಣ ಸಂಬಂಧ ಸಿಂಡಿಕೇಟ್ ಬ್ಯಾಂಕ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸುಧೀರ್ ಕುಮಾರ್ ಜೈನ್ ಹಾಗೂ ಇತರ ಐವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಜೈನ್ಗೆ ಸೇರಿದ ಬೆಂಗಳೂರು, ಭೋಪಾಲ್, ಮುಂಬೈ ಹಾಗೂ ದೆಹಲಿಯ 20 ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ಶನಿವಾರ ದಾಳಿ ನಡೆಸಿ 50 ಲಕ್ಷ ವಶಪಡಿಸಿಕೊಂಡಿದ್ದಾರೆ.
ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವ ಎರಡು ಕಂಪನಿಗಳಿಗೆ ಸಾಲ ಒದಗಿಸಲು ನೀತಿನಿಯಮಗಳನ್ನು ಗಾಳಿಗೆ ತೂರಿ 50 ಲಕ್ಷ ಲಂಚ ಪಡೆದಿದ್ದಾರೆ ಎನ್ನುವ ಆರೋಪ ಜೈನ್ ಮೇಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಮಾರು 26 ವರ್ಷಗಳ ಅನುಭವ ಹೊಂದಿರುವ ಎಸ್.ಕೆ.ಜೈನ್, 2013ರ ಜುಲೈ 8ರಂದು ಸಿಎಂಡಿ ಆಗಿ ಅಧಿಕಾರ ಸ್ವೀಕರಿಸಿದ್ದರು.