ಅಮೆರಿಕ ಸಂಸತ್ನಲ್ಲಿ ಪ್ರಧಾನಿ ಭಾಷಣ ಇಲ್ಲ?
ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ...
ವಾಷಿಂಗ್ಟನ್: ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಮೆರಿಕ ಸಂಸತ್ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಬಹುತೇಕ ಕಡಿಮೆ ಎಂದು ಹೇಳಲಾಗಿದೆ. ನವೆಂಬರ್ನಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಹೆಚ್ಚು ಒತ್ತು ಸಿಗುವ ಸಾಧ್ಯತೆ ಇದೆ. ಸಂಸದರು ಪ್ರಚಾರ ಕಾರ್ಯಕ್ಕಾಗಿ ತೆರಳಲಿರುವುದರಿಂದ ಜಂಟಿ ಅಧಿವೇಶನ ನಡೆಯುವುದು ಅನುಮಾನ. ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಸೆನೆಟ್ ಕಾರ್ಯನಿರ್ವಹಿಸದೇ ಇರುವುದರಿಂದ ಜಂಟಿ ಅಧಿವೇಶನ ನಡೆಸಲು ಸಾಧ್ಯವಾಗುತ್ತಿಲ್ಲ.