ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಜೆಡಿಎಸ್ ಮನವೊಲಿಕೆಗೆ ಕಾಂಗ್ರೆಸ್ ಕಸರತ್ತು

ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆ ಜೆಡಿಎಸ್ ನಾಯಕರ ಮನವೊಲಿಕೆಗೆ ಕಾಂಗ್ರೆಸ್...

Mainashree
Updated On : 13 Aug 2014, 11:43 am

ಶಿಕಾರಿಪುರ: ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆ ಜೆಡಿಎಸ್ ನಾಯಕರ ಮನವೊಲಿಕೆಗೆ ಕಾಂಗ್ರೆಸ್ ಮುಂದಾಗಿರುವುದು ಸ್ವತಃ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಹೇಳಿದ್ದಾರೆ.

ಹೌದು, ಚುನಾವಣೆಯ ಗೆಲುವಿಗಾಗಿ ಕಾಂಗ್ರೆಸ್ ನಾಯಕರು, ಜೆಡಿಎಸ್ ನಾಯಕರ ಮನವೊಲಿಕೆ ಮುಂದಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಶಿಕಾರಿಪುರ ಜೆಡಿಎಸ್ ಮುಖಂಡ ಹೆಚ್.ಟಿ ಬಳಿಗಾರ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಕಾಂಗ್ರೆಸ್ ಮುಖಂಡ ಮಂಜುನಾಥ್ ಭಂಡಾರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಟಿ ಬಳಿಗಾರ್ ರಹಸ್ಯ ಮಾತುಕತೆ ನಡೆಸಲಾಗಿದೆ.

ಶಿವಮೊಗ್ಗದ ಗಾಂಧಿನಗರದಲ್ಲಿರುವ ಭಂಡಾರಿ ನಿವಾಸದಲ್ಲಿ ತಡರಾತ್ರಿ ಮಾತುಕತೆ ನಡೆಸಿದ್ದು, ಕಾಂಗ್ರೆಸ್‌ಗೆ ಬೆಂಬಲಿಸಲು ಸಿದ್ದರಾಮಯ್ಯ ಮನವಿ ಮಾಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಬಳಿಗಾರ್‌ನ್ನು ಆಹ್ವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‌ಗೆ ಬೆಂಬಲಿಸುವಂತೆ ಕೋರಿ ನಿನ್ನೆ ಸಚಿವ ಹೆಚ್.ಸಿ ಮಹದೇವಪ್ಪ ಅವರು ಸೊರಬ ಕ್ಷೇತ್ರದ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಧು ಬಂಗಾರಪ್ಪ ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.

ಅಂತೂ ಬಿಜೆಪಿ ವಿರುದ್ಧ ತಿರುಗಿ ಬಿದ್ದಿರುವ ಕಾಂಗ್ರೆಸ್, ಜೆಡಿಎಸ್‌ನತ್ತ ಮುಖ ಮಾಡಿದೆ. ಆದರೆ, ಬೆಂಗಳೂರಿನಲ್ಲಿ ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಾಯಕರೊಡನೆ ಮಾತುಕತೆ ನಡೆಸುತ್ತಿರುವ ಜೆಡಿಎಸ್ ನಾಯಕರ ಮುಂದಿನ ನಡೆ ತೀವ್ರ ಕುತೂಹಲವನ್ನುಂಟುಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement