ರಾಜ್‌ನಾಥ್ ಸಿಂಗ್ 
ಪ್ರಧಾನ ಸುದ್ದಿ

ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯ: ರಾಜ್‌ನಾಥ್ ಸಿಂಗ್

ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ (ಗ್ಲೋಬಲ್ ಪೊಸಿಶನಿಂಗ್ ಸಿಸ್ಟಂ-ಭೌಗೋಳಿಕ ಸ್ಥಾನ ನಿರ್ದೇಶಕ) ವ್ಯವಸ್ಥೆ...

ನವದೆಹಲಿ: ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ (ಗ್ಲೋಬಲ್   ಪೊಸಿಶನಿಂಗ್ ಸಿಸ್ಟಂ-ಭೌಗೋಳಿಕ ಸ್ಥಾನ ನಿರ್ದೇಶಕ) ವ್ಯವಸ್ಥೆ ಅಳವಡಿಕೆ ಕಡ್ಡಾಯಗೊಳಿಸಬೇಕೆಂದು ಕೇಂದ್ರಗೃಹ ಸಚಿವ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ.

ದೆಹಲಿಯ ಯೂಬರ್ ಕ್ಯಾಬ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವಾ ಸಂಪರ್ಕ ವಾಹನಗಳ ನಿಯಮ ನಿಬಂಧನೆಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ಮಹಿಳೆಯರ ರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿರುವ ಕೇಂದ್ರ ಸರ್ಕಾರ ಮಹಿಳಾ ಸಹಾಯವಾಣಿ ಸಂಪರ್ಕ ವ್ಯವಸ್ಥೆಯನ್ನೂ ಹೆಚ್ಚಿಸಿದೆ. ಈ ಹಿಂದೆ ಮಹಿಳಾ ಸಹಾಯವಾಣಿ ನಂ.1091 ಗೆ ನಾಲ್ಕೇ ನಾಲ್ಕು ಲೈನ್ ಇತ್ತು. ಈಗ ಲೈನ್‌ಗಳ ಸಂಖ್ಯೆಯನ್ನು 10ಕ್ಕೇರಿಸಲಾಗಿದೆ. ಅದೇ ವೇಳೆ ಸಹಾಯವಾಣಿ ಸಂಖ್ಯೆ 100 ಕ್ಕೆ 60 ಲೈನ್‌ಗಳು ಇದ್ದವು. ಈಗ ಲೈನ್‌ಗಳ ಸಂಖ್ಯೆಯನ್ನೂ ನೂರಕ್ಕೇರಿಸಲಾಗಿದೆ ಎಂದು ರಾಜ್‌ನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ದೆಹಲಿಯಲ್ಲಿ ರಸ್ತೆ, ಪಾರ್ಕ್ ಹಾಗೂ ಸಾರ್ವಜನಿಕ ಪ್ರದೇಶಗಳು ಸೇರಿದಂತೆ 255 ನಿರ್ಜನ ಹಾಗೂ ಸೂಕ್ಷ್ಮ ಪ್ರದೇಶಗಳಿವೆ ಎಂದು ರಾಜ್ಯ ಸರ್ಕಾರ ಹೇಳಿದೆ. ಇಂಥಾ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷೆಗಾಗಿ ಪೊಲೀಸರನ್ನು ನಿಯೋಜಿಸಲಾಗುವುದು. ಹಾಗೆಯೇ ಮಹಿಳೆಯರಿಗೆ ಸ್ವಯಂ ರಕ್ಷಣಾ ಕಲೆಗಳಲ್ಲಿ ತರಬೇತಿ ನೀಡಲುಸರ್ಕಾರ ಮುಂದಾಗಿದೆ.  ಆದಾಗ್ಯೂ, ಪ್ರಸ್ತುತ ವರ್ಷ ದೆಹಲಿಯಲ್ಲಿ ಒಟ್ಟು 14,373 ಮಹಿಳೆಯರು ಸ್ವಯಂ ರಕ್ಷಣಾ ಕಲೆಯಲ್ಲಿ ಪರಿಣತರಾಗಿದ್ದಾರೆ ಎಂದು ಗೃಹ ಸಚಿವರು ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ , ದೆಹಲಿಯಲ್ಲಿ ಮಹಿಳೆಯರ ಸುರಕ್ಷೆಗಾಗಿ ಸ್ವಯಂ ರಕ್ಷಣಾ ಕಲೆಯನ್ನು ಕಲೆಯನ್ನು ಪ್ರೋತ್ಸಾಹಿಸಬೇಕು ಹಾಗು ಶಾಲಾ ಪಠ್ಯಕ್ರಮಗಳಲ್ಲಿ ಈ ವಿಷಯವನ್ನು ಅಳವಡಿಸಬೇಕೆಂದು ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ದೆಹಲಿ ಸರ್ಕಾರಕ್ಕೆ ವಿನಂತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT