ಬೆಳಗಾವಿ: ಡೀಸೆಲ್ ದರ ಐದು ಸಲ ಇಳಿದರೂ ಒಂದಿಲ್ಲೊಂದು ನೆಪ ಹೇಳುತ್ತ ಪ್ರಯಾಣ ದರ ಕಡಿಮೆ ಮಾಡಲು ನಿರಾಕರಿಸುತ್ತಿದ್ದ ಸರ್ಕಾರ ಕೊನೆಗೂ ಇಳಿಸುವ ನಿರ್ಧಾರ ಮಾಡಿದೆ.
ಈ ಬಗ್ಗೆ ಇಂದು ಸದನದಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ದಾಸರಹಳ್ಳಿ ಶಾಸಕ ಎಸ್.ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬಸ್ ಪ್ರಯಾಣ ದರ ಇಳಿಕೆ ಪ್ರಕ್ರಿಯೆ ಶುರುವಾಗಿದ್ದು, ಇನ್ನೆರಡು ದಿನದಲ್ಲಿ ಕಡಿಮೆ ಮಾಡುವುದಾಗಿ ತಿಳಿಸಿದ್ದಾರೆ.
ಬಸ್ ಪ್ರಯಾಣ ದರದಲ್ಲಿ ಶೇ. ಎಷ್ಟು ಕಡಿಮೆ ಮಾಡಬಹುದು ಎಂಬುದರ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಧಿಕೃತ ಘೋಷಣೆ ಮಾಡುವುದಾಗಿ ಸಾರಿಗೆ ಸಚಿವರು ಹೇಳಿದ್ದಾರೆ.