ನವಜೋತ್ ಸಿಂಗ್ ಸಿಧು 
ಪ್ರಧಾನ ಸುದ್ದಿ

ನವಜೋತ್ ಸಿಂಗ್ ಸಿಧು ಮೇಲೆ ಹಲ್ಲೆಗೆ ಯತ್ನ

ಜಮ್ಮುನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ನಾಯಕ ನವಜೋತ್ ಸಿಂಗ್ ಸಿಧು ಅವರ ಮೇಲೆ ಆಗಂತುಕರು ಹಲ್ಲೆ...

ಜಮ್ಮು : ಜಮ್ಮುನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ನಾಯಕ ನವಜೋತ್ ಸಿಂಗ್ ಸಿಧು ಅವರ ಮೇಲೆ ಆಗಂತುಕರು ಹಲ್ಲೆ ನಡೆಸಲು ಯತ್ನಿಸಿದ ಘಟನೆ ಗುರುವಾರ ನಡೆದಿದೆ.

ಇಲ್ಲಿನ ಭೋರ್ ಕ್ಯಾಂಪ್ ಪ್ರದೇಶದಲ್ಲಿ ಗಾಂಧೀನಗರದ ಬಿಜೆಪಿ ಅಭ್ಯರ್ಥಿ ಕವಿಂದರ್ ಗುಪ್ತಾ ಅವರ ಪರ ಸಿಧು ಪ್ರಚಾರ ನಡೆಸುತ್ತಿದ್ದರು. ಆ ವೇಳೆ ಆಗಂತುಕರು ಸಿಧು ಬೆಂಗಾವಲು ಕಾರಿಗೆ ಇಟ್ಟಿಗೆ ಹಾಗು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿದ್ದಾರೆ. ಈ ವೇಳೆ ಸಿಧು ಅವರು ಪಾರಾಗಿದ್ದರೂ, ಅವರ ಕಾರು ಚಾಲಕನಿಗೆ ಗಾಯಗಳಾಗಿವೆ.

ಇತ್ತೀಚೆಗೆ ಸಿಧು ತಮ್ಮ ಧರ್ಮಗ್ರಂಥದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದೇ ಈ ಹಲ್ಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಿಧು ಬೆಂಗಾವಲು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹಲ್ಲೆಗೊಳಗಾಗಿರುವ ಚಾಲಕ ಪ್ರವೀಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಧು ಅವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ ಎಂದು ಬಿಜೆಪಿ ವಕ್ತಾರ ಅರುಣ್ ಗುಪ್ತಾಹೇಳಿದ್ದಾರೆ.

ಈ ಘಟನೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ ಗುಪ್ತಾ, ನಾವು ಈ ಕೃತ್ಯವನ್ನು ಖಂಡಿಸುತ್ತೇವೆ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ. ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಅಲ್ಲ ಇಡೀ ರಾಜ್ಯದಲ್ಲಿ ಬಿಜೆಪಿಗೆ ಜನಪ್ರಿಯತೆ ಸಿಗುತ್ತಿರುವುದನ್ನು ನೋಡಿ ಅಸೂಯೆಯಿಂದ ಕಾಂಗ್ರೆಸ್ ಈ ಕೃತ್ಯ ಮಾಡಿದೆ ಎಂದಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಸಿಧು ಭೋರ್ ಕ್ಯಾಂಪ್‌ನಲ್ಲಿ ನಡೆಸುತ್ತಿದ್ದ ಪ್ರಚಾರ ಕಾರ್ಯಕ್ರಮವನ್ನು ರದ್ದುಗೊಳಿಸಿ, ಬೇರೆ ಪ್ರದೇಶದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT