ಶಿವಕುಮಾರ್ ಯಾದವ್ 
ಪ್ರಧಾನ ಸುದ್ದಿ

ನಕಲಿ ದಾಖಲೆ ಸೃಷ್ಟಿ; ಯೂಬರ್ ಕ್ಯಾಬ್ ಪ್ರಕರಣದ ಅತ್ಯಾಚಾರಿಗೆ ನ್ಯಾಯಾಂಗ ಬಂಧನ

ಗುರ್‌ಗಾಂವ್‌ನಲ್ಲಿ ಯೂಬರ್ ಕ್ಯಾಬ್‌ನಲ್ಲಿ 27ರ ಹರೆಯದ ಯುವತಿಯನ್ನು ಅತ್ಯಾಚಾರಗೈದ ಪ್ರಕರಣದ ಆರೋಪಿ ನಕಲಿ ದಾಖಲೆ ಸೃಷ್ಟಿಸಿದ ಕೇಸಿನಲ್ಲಿಯೂ...

ದೆಹಲಿ: ಗುರ್‌ಗಾಂವ್‌ನಲ್ಲಿ ಯೂಬರ್ ಕ್ಯಾಬ್‌ನಲ್ಲಿ 27ರ ಹರೆಯದ ಯುವತಿಯನ್ನು ಅತ್ಯಾಚಾರಗೈದ ಪ್ರಕರಣದ ಆರೋಪಿ ನಕಲಿ ದಾಖಲೆ ಸೃಷ್ಟಿಸಿದ ಕೇಸಿನಲ್ಲಿಯೂ ಆರೋಪಿಯಾಗಿದ್ದು, ಈ ಕೇಸಿಗೆ ಸಂಬಂಧಿಸಿದಂತೆ ಈತನಿಗೆ ಜನವರಿ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 ಯೂಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್ ಮತ್ತು ಜವ್‌ನೀತ್ ಸಿಂಗ್ ಅವರನ್ನು ನಕಲಿ ದಾಖಲೆ ಸೃಷ್ಟಿಸಿದ ಆರೋಪದಲ್ಲಿ ಬಂಧಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೊಪೊಲಿಟನ್ ಮೆಜಿಸ್ಟ್ರೇಟ್ ಜಗ್‌ಮಿಂದರ್ ಸಿಂಗ್, ಪೊಲೀಸ್ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಆರೋಪಿಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಇಬ್ಬರು ಆರೋಪಿಗಳು ನಕಲಿ ಕ್ಯಾರೆಕ್ಟರ್ ಸರ್ಟಿಫಿಕೇಟ್ ಸೃಷ್ಟಿಸಿದ್ದು, ಇವರಿಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಬಂಧನಾವಧಿ ಮುಗಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!