ಬೆಳಗಾವಿ ಅಧಿವೇಶನ 
ಪ್ರಧಾನ ಸುದ್ದಿ

ಉಭಯ ಸದನಗಳ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕಳೆದ 10 ದಿನಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಅಧಿಕೃತ ತೆರೆ ಬಿದ್ದಿದೆ.

ಬೆಳಗಾವಿ: ಕಳೆದ 10 ದಿನಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಅಧಿಕೃತ ತೆರೆ ಬಿದ್ದಿದೆ. ಪ್ರತಿಪಕ್ಷ ಬಿಜೆಪಿ ಸದಸ್ಯರ ಧರಣಿಯ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಇಂದು ಬೆಳಗ್ಗೆ ವಿಧಾಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಳಂಕಿತ ಸಚಿವರ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ ರೈತರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೆಂದು ಜೆಡಿಎಸ್ ಶಾಸಕರು ಆಗ್ರಹಿಸಿದರು. ಆದರೆ, ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಯಾವುದಕ್ಕೂ ಅವಕಾಶ ನೀಡದೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಇನ್ನು ವಿಧಾನ ಪರಿಷತ್ತಿನಲ್ಲೂ ಬಿಜೆಪಿ ಕಳಂಕಿತ ಸಚಿವರ ಕುರಿತು ಚರ್ಚಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದು, ಪ್ರತಿಪಕ್ಷಗಳ ಗದ್ದಲದ ನಡುವೆಯೂ ಕರ್ನಾಟಕ ಮರಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ 2014, ಗೋಹತ್ಯೆ ನಿಷೇಧ ಹಿಂಪೆಡಯುವ ವಿಧೇಯಕ ಹಾಗೂ ಕರ್ನಾಟಕ ಸ್ಟ್ಯಾಂಪ್ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷ ಸದಸ್ಯರು ಧರಣಿ ಮುಂದುವರೆಸಿದ್ದರಿಂದ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸಹ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಬಳಿಕ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಕಲಾಪವನ್ನು ಹಾಳು ಮಾಡಿದ್ದೀರಿ, ನಿಮಗೆ ನಾಚಿಕೆಯಾಗಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದ ಸಿಎಂ, ಬಿಜೆಪಿಯವರೇ ಭ್ರಷ್ಟಾಚಾರದ ನಿರ್ಮಾತೃಗಳು, ಬಿಜೆಪಿಯ ಏಳು ನಾಯಕರು ಜೈಲು ಹೋಗಿ ಬಂದಿದ್ದಾರೆ ಎಂದರು.

ಇನ್ನು ಸರ್ಕಾರದ ವಿರುದ್ಧ ಹರಿಹಾಯ್ದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ನಾವು ಈ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ ಆದರೆ ಭ್ರಷ್ಟ ಸಚಿವರ ಬಗ್ಗೆ ಚರ್ಚೆಗೆ ಅವಕಾಶ ಸಿಗದಿರುವುದು ಬೇಸರ ತಂದಿದೆ ಎಂದರು. ಅಲ್ಲದೆ ಇದೊಂದು ಬೇಜವಾಬ್ದಾರಿ ಸರ್ಕಾರ ಎಂದು ಆರೋಪಿಸಿದರು.

ನಿರೀಕ್ಷೆಯಷ್ಟು ಅಧಿವೇಶನ ಯಶಸ್ವಿಯಾಗಿಲ್ಲ
ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, ತುಂಬಾ ನಿರೀಕ್ಷೆಯಿಂದ ಅಧಿವೇಶನ ಆರಂಭಿಸಿದ್ದೇವು. ಆದರೆ ನಿರೀಕ್ಷೆಯಷ್ಟು ಅಧಿವೇಶನ ಯಶಸ್ವಿಯಾಗಿಲ್ಲ. ಶೇ.60ರಷ್ಟು ತೃಪ್ತಿ ತಂದಿದೆ ಎಂದು ಹೇಳಿದರು. ಅಲ್ಲದೆ ನಾನು ಹಿರಿಯನಿದ್ದೇನೆ, ಸಾಕಷ್ಟು ಅನುಭವ ಇದೆ. ಹೀಗಾಗಿ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ