ಪ್ರಧಾನ ಸುದ್ದಿ

1984ರ ದೊಂಬಿ 'ಹತ್ಯಾಕಾಂಡ'ವಾಗಿತ್ತು: ರಾಜ್ ನಾಥ್ ಸಿಂಗ್

Rashmi Kasaragodu

ನವದೆಹಲಿ: 1984ರಲ್ಲಿ ನಡೆದ ಸಿಖ್ ದಂಗೆ ಹತ್ಯಾಕಾಂಡವಾಗಿತ್ತು ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಹೇಳಿದ್ದಾರೆ. ಖಂಡಿತವಾಗಿಯೂ ಸಿಖ್ ದಂಗೆ ಸಂತ್ರಸ್ತರಿಗೆ ನ್ಯಾಯ ಸಿಗುತ್ತದೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಭಾರತದ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಸಚಿವರು ಹೇಳಿದ್ದಾರೆ.

ಪಶ್ಚಿಮ ದೆಹಲಿಯ ತಿಲಕ್ ವಿಹಾರ್ ಪುನರ್ವಸತಿ ಕಾಲನಿಯಲ್ಲಿ  1984ರ ಸಿಖ್ ದಂಗೆ ಸಂತ್ರಸ್ತರನ್ನು ಭೇಟಿ ಮಾಡಿ ಚೆಕ್ ವಿತರಿಸಿದ  ರಾಜ್ನಾಥ್ ಸಿಂಗ್, ನಾನಿಲ್ಲಿ ರಾಜಕೀಯ ಭಾಷಣ ಮಾಡಲು ಬಂದಿಲ್ಲ, ಆದರೆ ಕೆಲವೊಂದು ವ್ಯಕ್ತಿಗಳಿಗೆ ಇನ್ನೂ ಶಿಕ್ಷೆ ಸಿಕ್ಕಿಲ್ಲ. ನನಗೆ ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸವಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವಲ್ಲಿಯವರಿಗೆ ಸಂತ್ರಸ್ತರಿಗೆ ನೆಮ್ಮದಿ ಸಿಗಲ್ಲ. ಸರ್ಕಾರ ನಿಮ್ಮೊಂದಿಗೆ ಇದೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಅಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಗ್, ಸಿಖ್ ದಂಗೆಯಲ್ಲಿ ಜೀವ ಕಳೆದುಕೊಂಡ ವ್ಯಕ್ತಿಗಳ ಕುಟುಂಬಗಳ 16 ಸದಸ್ಯರಿಗೆ ತಲಾ 5 ಲಕ್ಷದ ಚೆಕ್ ವಿತರಿಸಿದ್ದಾರೆ. ಆದಾಗ್ಯೂ, ದಾಖಲೆಗಳನ್ನು ಪರಿಶೀಲನೆ ನಡೆಸಿದ ನಂತರ ಶೀಘ್ರದಲ್ಲೇ 2,459 ಜನರಿಗೆ ಚೆಕ್ ವಿತರಿಸಲಾಗುವುದು ಎಂದು ಸರ್ಕಾರದ ಮೂಲಗಳು ಹೇಳಿವೆ.

ಏತನ್ಮಧ್ಯೆ, ಸಂತ್ರಸ್ತರಿಗೆ ಪರಿಹಾರ ಒದಗಿಸುವುದಕ್ಕಾಗಿ ನಾವು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ  ಸಮಿತಿಯೊಂದನ್ನು ರಚಿಸಿದ್ದೇವೆ. ಸಂತ್ರಸ್ತರು ತಮ್ಮ ದೂರುಗಳನ್ನು ಈ ಸಮಿತಿಗೆ ಸಲ್ಲಿಸುವ ಮೂಲಕ ಬೇಗನೆ ಪರಿಹಾರ ಒದಗಿಸಲು ನಮಗೆ ಸಾಧ್ಯವಾಗುವುದು ಎಂದು ಸಚಿವರು ಹೇಳಿದ್ದಾರೆ.

SCROLL FOR NEXT