ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು (ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ಬೆಂಗಳೂರು ಸ್ಫೋಟ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬಾಂಬ್ ಸ್ಫೋಟಗೊಂಡ ಹೊಟೆಲ್ ನ ಭದ್ರತಾ ಸಿಬ್ಬಂದಿ ಮತ್ತು ಸಮೀಪದಲ್ಲಿರು ಪಾನ್ ಶಾಪ್ ಅಂಗಡಿಯಾತನನ್ನು ಪೊಲೀಸರು ಶಂಕೆಯ ಮೇರೆಗೆ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಾಂಬ್ ಸ್ಫೋಟದಲ್ಲಿ ಸ್ಥಳೀಯರ ಕೈವಾಡದ ಶಂಕೆಯ ಮೇರೆಗೆ ಪೊಲೀಸರು ಈ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹಸಚಿವರ ಕರೆ
ಇದೇ ವೇಳೆ ಬಾಂಬ್ ಸ್ಫೋಟ ವಿಚಾರ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿರುವ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು,ಲ ಘಟನೆಯ ವಿವರ ಕೋರಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ರಾಜ್ಯದ ಭದ್ರತಾ ದೃಷ್ಟಿಯ ಹಿನ್ನಲೆಯಲ್ಲಿ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಸ್ತುತ ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು ಆಗಮಿಸಿದ್ದು, ಘಟನಾ ಸ್ಥಳದಲ್ಲಿ ಪರೀಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ