ಅಂಬರೀಷ್ ಅಸ್ವಸ್ಥ ಆಸ್ಪತ್ರೆಗೆ ದಾಖಲು
ಬೆಂಗಳೂರು: ಶ್ವಾಸಕೋಶದ ಸಮಸ್ಯೆ ಹಾಗೂ ರಕ್ತದೊತ್ತಡದಲ್ಲಿ ಏರಿಳಿತದಿಂದ ವಸತಿ ಸಚಿವ ಅಂಬರೀಷ್ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ಶುಕ್ರವಾರ ರಾತ್ರಿ ದಾಖಲಿಸಲಾಗಿದೆ. ಸಂಜೆ ಹಟಾತ್ತನೆ ಮಧುಮೇಹ ಹಾಗೂ ರಕ್ತದೊತ್ತಡದಲ್ಲಿ ತೀವ್ರ ಇಳಿಕೆಯಾಗಿದೆ. ಶ್ವಾಸಕೋಶ ಸೋಂಕಿನ ಕಾರಣ ಉಸಿರಾಟದ ತೊಂದರೆಯಾಗಿದೆ. ಕಳೆದ ಮೂರು ದಿನಗಳಿಂದ ಅಂಬರೀಷ್ ಜ್ವರದಿಂದಲೂ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 2 ದಿನಗಳ ಕಾಲ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಚಿವ ಯು.ಟಿ.ಖಾದರ್, ಸಂಸದೆ ರಮ್ಯಾ ಸೇರಿದಂತೆ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು.