ಹೈದರಾಬಾದ್ ಏರ್ಪೋರ್ಟ್ಗೆ ಬಾಂಬ್ ಬೆದರಿಕೆ
ನವದೆಹಲಿ: ಬಾಂಬ್ ಸ್ಫೋಟದ ಬೆದರಿಕೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ದೆಹಲಿಯಿಂದ ಬರುವ ಅಥವಾ ಹೋಗುವ ವಿಮಾನವೊಂದರಲ್ಲಿ ಸ್ಫೋಟಕಗಳ ಸಾಗಣೆ ಮಾಡಲಾಗುತ್ತದೆ. ಅವುಗಳನ್ನು ವಿಮಾನ ಸ್ಫೋಟಕ್ಕೆ ಬಳಸಲಾಗುವುದು ಎಂದು ಏರ್ಪೋರ್ಟ್ಗೆ ಬಂದ ಅನಾಮಧೇಯ ಪತ್ರವೊಂದರಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್ ಏರ್ಪೋರ್ಟ್ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.