ಮಗಳ ಮೇಲೆ ಅತ್ಯಾಚಾರ: ತಂದೆಗೆ 10 ವರ್ಷ ಶಿಕ್ಷೆ
ಚಿಕ್ಕಮಗಳೂರು: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಹಾಗೂ 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಇಲ್ಲಿನ ಕಲ್ಲುದೊಡ್ಡಿ ಬಡಾವಣೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿ ರೆಹಮುತ್ತುಲ್ಲಾ ಶಿಕ್ಷೆಗೆ ಒಳಗಾದವ.
ಅತ್ಯಾಚಾರ ನಂತರ ಈ ವಿಚಾರ ತಾಯಿಗೆ ಹೇಳಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 14 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಚ್.ಎಸ್. ಕಮಲಾ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕ ವಿ.ಆರ್. ಉಪಾಧ್ಯೆ ಮೊಕದ್ದಮೆ ನಡೆಸಿದ್ದರು.