ಮಗುವಿನ ಮೇಲೆ ಅತ್ಯಾಚಾರ: ವೃದ್ಧ ಸೆರೆ
ಹರಿಹರ: ಮಗುವಿನ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧಿಸಿದಂತೆ ಈ ಕೃತ್ಯ ಎಸಗಿದ ವೃದ್ಧನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ರಾಜನಹಳ್ಳಿ ಗ್ರಾಮದ ನಿವಾಸಿ ಬಿ.ಬಸವರಾಜ (65) ಬಂಧಿತ ಆರೋಪಿ. ಫೆ.17ರಂದು ಸಂಜೆ 4ಕ್ಕೆ ಮಗುವೊಂದನ್ನು ಗ್ರಾಮದಲ್ಲಿರುವ ಗ್ರಂಥಾಲಯಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ದೂರು ನೀಡಲಾಗಿದೆ. ಘಟನೆ ಫೆ.22ರಂದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಆರೋಪಿ ಬಸವರಾಜಗೆ ಧರ್ಮದೇಟು ನೀಡಿದ್ದಾರೆ. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರವಿನಾರಾಯಣ ಹಾಗೂ ಸಿಪಿಐ ಪಂಪನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಗ್ರಾಮಾಂತರ ಪಿಎಸ್ಐ ಎಚ್. ಸುನಿಲ್ ಕುಮಾರ್ ತಿಳಿಸಿದ್ದಾರೆ.