ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಆರ್‌ಜೆಡಿ ಹೋಳು; 7 ಶಾಸಕರ ರಾಜಿನಾಮೆ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ಬಿಹಾರ ವಿಧಾನಸಭೆಯಲ್ಲಿರುವ...

Rashmi Kasaragodu
Updated On : 25 Feb 2014, 1:10 am

ಪಿಟಿಐ     ಪಟನಾ/ನವದೆಹಲಿ     ಫೆ.24
ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ಬಿಹಾರ ವಿಧಾನಸಭೆಯಲ್ಲಿರುವ 22 ಶಾಸಕರ ಪೈಕಿ 13 ಮಂದಿ ಶಾಸಕರು ಪಕ್ಷಕ್ಕೆ ರಾಜಿನಾಮೆ ನೀಡಿ, ಮುಖ್ಯಮಂತ್ರಿ ನಿತೀಶ್‌ಕುಮಾರ್ ನೇತೃತ್ವದ ಜೆಡಿಯುಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಕೊನೆಯ ಕ್ಷಣದಲ್ಲಿ ಪಕ್ಷ ತ್ಯಾಗದ ವರದಿಯನ್ನು ಆರು ಮಂದಿ ಶಾಸಕರು ತಳ್ಳಿ ಹಾಕಿದ್ದಾರೆ. ಲಾಲು ಯಾದವ್ ಪಕ್ಷದ ಶಾಸಕರ ನಿರ್ಧಾರ ಬಹುಮತದ ಕೊರತೆ ಎದುರಿಸುತ್ತಿರುವ ನಿತೀಶ್‌ಕುಮಾರ್‌ಗೆ ಆಸರೆಯಾಗಿ ಬಂದಂತಾಗಿದೆ. 243 ಸದಸ್ಯ ಬಲದ ವಿಧಾನಸಭೆಯಲ್ಲಿ ಜೆಡಿಯು 116 ಸದಸ್ಯರನ್ನು ಹೊಂದಿದೆ. 7 ಮಂದಿ ಆರ್‌ಜೆಡಿ ಶಾಸಕರ ಬೆಂಬಲದಿಂದಾಗಿ ನಿತೀಶ್‌ಕುಮಾರ್‌ಗೆ ಬಹುಮತ ಪ್ರಾಪ್ತಿಯಾಗಲಿದೆ. ಸರಳ ಬಹುಮತಕ್ಕೆ ಅಗತ್ಯವಿರುವ ಸಂಖ್ಯೆ 122.

ಮೈತ್ರಿಗೆ ಅಡ್ಡಿ ಏನೂ ಇಲ್ಲ; ಎಲ್‌ಜೆಪಿ
ಗುಜರಾತ್ ಗಲಭೆ ಪ್ರಕರಣದಲ್ಲಿ ನರೇಂದ್ರ ಮೋದಿಗೆ ಕೋರ್ಟ್ ಕ್ಲೀನ್‌ಚಿಟ್ ನೀಡಿರುವುದರಿಂದ ಬಿಜೆಪಿ ಜತೆಗಿನ ಮೈತ್ರಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂಬ ಸೂಚನೆಯನ್ನು ಕೇಂದ್ರದ ಮಾಜಿ ಸಚಿವ ರಾಮ್‌ವಿಲಾಸ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ನೀಡಿದೆ.  ಮುಂದಿನ 2 ದಿನಗಳಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಮೈತ್ರಿ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ. ಕಾಂಗ್ರೆಸ್ ಜೊತೆಗಿನ ಮಾತುಕತೆಯೂ ಮುಂದುವರಿಯಲಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement