ಇಂದು ರಾಜ್ಯಕ್ಕೆ ರಾಜನಾಥ್ ಸಿಂಗ್
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಬುಧವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ದೊಡ್ಡಬಳ್ಳಾಪುರ ಹಾಗೂ ಶಿವಮೊಗ್ಗದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಮೈದಾನ ಹಾಗೂ ಸಂಜೆ 4 ಗಂಟೆಗೆ ಶಿವಮೊಗ್ಗದ ಮುನ್ಸಿಪಲ್ ಮೈದಾನದಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ ಅವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.