ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸಿ.ಆರ್.ಸಿಂಹ ಸ್ಥಿತಿ ಗಂಭೀರ

ರಂಗಕರ್ಮಿ, ಹಿರಿಯನಟ ಸಿ.ಆರ್.ಸಿಂಹ ಕೆಲವು ದಿನಗಳಿಂದ ತೀವ್ರ...

Mainashree
Updated On : 28 Feb 2014, 10:17 am

ಕನ್ನಡಪ್ರಭ  ಬೆಂಗಳೂರು  ಫೆ.27
ರಂಗಕರ್ಮಿ, ಹಿರಿಯನಟ ಸಿ.ಆರ್.ಸಿಂಹ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಒಂದು ತಿಂಗಳಿಂದ ನಗರದ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹತ್ತು ದಿನಗಳಿಂದ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
'ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ವೈದ್ಯರು ಕೂಡ ಅವರ ಆರೋಗ್ಯದ ಬಗ್ಗೆ ಖಚಿತವಾಗಿ ಹೇಳುತ್ತಿಲ್ಲ. ಯಾವ ಸಮಯದಲ್ಲಿ ಏನಾಗುತ್ತದೆ ಅಂತ ಹೇಳಲಾಗದ ಸ್ಥಿತಿಯಲ್ಲಿ ನಾವಿದ್ದೇವೆ' ಎಂದು ಸಿ.ಆರ್. ಸಿಂಹ ಅವರ ಪತ್ನಿ ಶಾರದಾ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ. ಶಾರದಾ ಅವರು ಆಸ್ಪತ್ರೆಯಲ್ಲೇ ಇದ್ದು ಸಿಂಹ ಅವರ ಯೋಗಕ್ಷೇವು ನೋಡಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement