ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕೃಷ್ಣಾ ತೀರ್ಪು: 9ರಂದು ಕಾನೂನು ತಜ್ಞರ ಜತೆ ಸಭೆ

Mainashree
Updated On : 4 Jan 2014, 9:59 am

ಬಿಜಾಪುರ: ಕೃಷ್ಣಾ ನ್ಯಾಯಾಧಿಕರಣದ ಅಂತಿಮ ತೀರ್ಪಿನ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರ ಜತೆಗೆ ಜ.9ರಂದು ದೆಹಲಿಯಲ್ಲಿ ಸಭೆ ಏರ್ಪಡಿಸಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಹೇಳಿದರು. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಜ.9ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾನೂನು ತಜ್ಞರ ತಂಡದ ಮುಖ್ಯಸ್ಥ ನಾರಿಮನ್, ಪ್ರಧಾನ ಸಲಹೆಗಾರ ಡಿ.ಎನ್.ದೇಸಾಯಿ, ಅಡ್ವೋಕೇಟ್ ಜನರಲ್, ತಾಂತ್ರಿಕ ತಜ್ಞರು, ನೀರಾವರಿ ತಜ್ಞರ ಜತೆ ನವದೆಹಲಿಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗುವುದು. ಅವರ ಸಲಹೆ ಪಡೆದು ಮುಂದೆ ಅನುಸರಿಸಬೇಕಾದ ಕ್ರಮದ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದರು.
ಕೃಷ್ಣಾ ನ್ಯಾಯಾಧಿಕರಣದ ತೀರ್ಪು ಹೊರ ಬಿದ್ದ ಬಳಿಕ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪ ಮಾಡಲಾಗಿದೆ. ರಾಜ್ಯದ ನೆಲ, ಜಲ ವಿಷಯ ಬಂದಾಗ ಒಗ್ಗಟ್ಟಿನಿಂದ ಕ್ರಮ ಕೈಗೊಳ್ಳಲು ಸರ್ಕಾರ ತೆರೆದ ಮನಸ್ಸು ಹೊಂದಿದೆ.ದೆಹಲಿಯಲ್ಲಿ ಕಾನೂನು ತಜ್ಞರ ಮುಂದೆ ಯಾವ ವಿಷಯಗಳನ್ನು ಚರ್ಚಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement