ಕಣಕ್ಕಿಳಿಯಲು ನಿಲೇಕಣಿ ಸಿದ್ಧ
ಬೆಂಗಳೂರು: ರಾಜಕೀಯದಿಂದ ಮಾತ್ರ ಪರಿವರ್ತನೆ ಸಾಧ್ಯ. ಹಾಗಾಗಿ, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವುದಾಗಿ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಬಯಕೆ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ದೇಶದಲ್ಲಿನ ವ್ಯವಸ್ಥೆ ಸುಧಾರಣೆಗೆ ರಾಜಕೀಯ ಒಂದು ಪ್ರಮುಖ ಸಾಧನ. ವ್ಯವಸ್ಥೆಯಲ್ಲಿ ಏನಾದರೂ ಪರಿವರ್ತನೆ ತರಬೇಕಿದ್ದರೆ ರಾಜಕೀಯ ಅತ್ಯಗತ್ಯ. ಹಾಗಾಗಿ ತಾವು ರಾಜಕೀಯದ ಭಾಗವಾಗಿರಲು ಬಯಸುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅವರು ಹೇಳಿದರು. ನಾಲ್ಕು ವರ್ಷಕ್ಕೂ ಅಧಿಕ ಕಾಲ ಆಧಾರ್ನ ಮುಖ್ಯಸ್ಥನಾಗಿ ಕೆಲಸ ಮಾಡಿದ್ದೇನೆ. ಭ್ರಷ್ಟಾಚಾರ ವಿರೋಧಿಯಾದ ಆ ಯೋಜನೆಗೆ ಕಾಂಗ್ರೆಸ್ ಸರ್ಕಾರ ಉತ್ತಮ ಸಹಕಾರ ನೀಡಿದೆ. ಹಾಗಾಗಿ ಕಾಂಗ್ರೆಸ್ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಕ್ಷೇತ್ರದ ಬಗ್ಗೆ ಪಕ್ಷವೇ ತೀರ್ಮಾನ ಕೈಗೊಳ್ಳಲಿದೆ ಎಂದರು.