ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಅಂಗವಿಕಲರನ್ನು ಅವಮಾನಿಸಿದ ಅಧಿಕಾರಿ ವಜಾಕ್ಕೆ ಆಗ್ರಹ

Mainashree
Updated On : 27 Jan 2014, 11:08 am

ಬೆಳಗಾವಿ: 'ಅಂಗವಿಕಲರು ಭಿಕ್ಷುಕರು. ಅವರಿಂದ ಸರ್ಕಾರಕ್ಕೆ ಹೊರೆ' ಎಂದು ಹೇಳಿಕೆ ನೀಡಿದ ರಾಜ್ಯ ಅಂಗವಿಕಲ ಹಾಗೂ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ನಿರ್ದೇಶಕರನ್ನು ಕೂಡಲೆ ರಾಜ್ಯ ಸರ್ಕಾರ ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರು ಹಾಗೂ ವಿವಿಧೋದ್ದೇಶಗಳ (ಎಂಆರ್‌ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ (ವಿಆರ್‌ಡಬ್ಲ್ಯೂ) ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಇತ್ತೀಚೆಗೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಹಂಪಿ ಉತ್ಸವ ನಿಮಿತ್ತ ಏರ್ಪಡಿಸಿದ್ದ ರಾಜ್ಯ ಮಟ್ಟದ ಅಂಗವಿಕಲರ ಕ್ರೀಡಾಕೂಟಕ್ಕೆ ಆಗಮಿಸಿದ್ದ ನಿರ್ದೇಶಕರ ಮುಂದೆ ತಮ್ಮ ಸಂಕಷ್ಟಗಳಿಗೆ ಸ್ಪಂದಿಸುವಂತೆ ಮನವಿ ಮಾಡಿಕೊಂಡಾಗ ಅವಮಾನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಾಜ್ಯದಲ್ಲಿ 35 ಲಕ್ಷಕ್ಕೂ ಅಧಿಕ ಅಂಗವಿಕಲರಿದ್ದಾರೆ. ಅವರ ಪುನರ್ವಸತಿಗಾಗಿ ಸರ್ಕಾರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ರಾಜ್ಯ 176 ತಾಲೂಕುಗಳಿಗೆ ಪದವೀಧರ ಅಂಗವಿಕಲರನ್ನು ಎಂಆರ್‌ಡಬ್ಲ್ಯೂ ಆಗಿ ಮತ್ತು 5628 ಗ್ರಾಪಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪೂರೈಸಿದವರನ್ನು ವಿಆರ್‌ಡಬ್ಲ್ಯೂಗಳೆಂದು ನೇಮಿಸಿದೆ. ಆದರೆ, ಕಳೆದ 7 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಯಾವುದೇ ರೀತಿಯ ಸೇವಾ ಭದ್ರತೆಯಿಲ್ಲ. ಕಡಿಮೆ ವೇತನ ನೀಡುವ ವ್ಯವಸ್ಥೆಯಿದೆ. ಇಂಥ ಅತಂತ್ರ ಸ್ಥಿತಿಯಲ್ಲಿರುವವರಿಗೆ ಸೇವಾ ಭದ್ರತೆ, ಕನಿಷ್ಠ ವೇತನ ನೀಡುವಂತೆ ಕೇಳಿದಕ್ಕೆ 'ಭಿಕ್ಷುಕರು' ಎಂದು ಕರೆಯುವ ಮೂಲಕ ಅವಮಾನವೆಸಗಿದ್ದಾರೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement