ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬೆಂ.-ಮಂಗ್ಳೂರು ವಿಮಾನದಲ್ಲಿ ಲೈಂಗಿಕ ಕಿರುಕುಳ: ವ್ಯಕ್ತಿ ಬಂಧನ

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಮಲೇಷ್ಯಾ ಮೂಲದ ವಿದ್ಯಾರ್ಥಿನಿಯೊಬ್ಬಳಿಗೆ...

Mainashree
Updated On : 28 Jan 2014, 10:13 am

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಮಲೇಷ್ಯಾ ಮೂಲದ ವಿದ್ಯಾರ್ಥಿನಿಯೊಬ್ಬಳಿಗೆ ಸಹಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿ ಉತ್ತರ ಪ್ರದೇಶ ಮೂಲದ ಅಂಕುಶ್ ಅಗರವಾಲ್(36).
ಸಂತ್ರಸ್ತ ವಿದ್ಯಾರ್ಥಿನಿ ಮಂಗಳೂರಿನ ದೇರಳಕಟ್ಟೆ ವೈದ್ಯಕೀಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಮಂಗಳವಾರ ಬೆಳಗ್ಗೆ ಬೆಂಗಳೂರಿಂದ ಮಂಗಳೂರಿಗೆ ಜೆಟ್ ಏರ್‌ವೇಸ್‌ನಲ್ಲಿ ಆಗಮಿಸುತ್ತಿದ್ದಾಗ ಅಂಕುಶ್ ನಿದ್ದೆಯಲ್ಲಿರುವಂತೆ ನಟಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. 'ನನ್ನ ಬಲ ತೊಡೆಯನ್ನು ಎಡಕೈಯಿಂದ ಅಮುಕಿದ್ದಾನೆ' ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ.
ಅಂಕುಶ್ ಮಣಿಪಾಲದ ಆಸ್ಪತ್ರೆಯೊಂದರಲ್ಲಿ ಕ್ವಾಲಿಟಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ವಿಮಾನದಿಂದ ಇಳಿದ ವಿದ್ಯಾರ್ಥಿನಿ ನಿಲ್ದಾಣ ಪ್ರಾಧಿಕಾರ ಕಚೇರಿಗೆ ತೆರಳಿ ಕಿರುಕುಳ ನೀಡಿದ ವಿಚಾರ ತಿಳಿಸಿದ್ದು, ಅವರು ಬಜ್ಪೆ ಪೊಲೀಸರಿಗೆ ದೂರು ನೀಡಿದರು. ಆರೋಪಿ ಅಂಕುಶ್ ಕಾರ್‌ನಲ್ಲಿ ಮಣಿಪಾಲಕ್ಕೆ ತೆರಳಿದ್ದು, ಮಾರ್ಗ ಮಧ್ಯೆ ವಾಪಸ್ ಕರೆಯಿಸಿಕೊಂಡು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈತನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಆರೋಪಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಕುರಿತು ಐಪಿಸಿ ಸೆಕ್ಷನ್ 344ರಡಿಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement