ಸಲಿಂಗಕಾಮ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ನಕಾರ
ದೇಶದಲ್ಲಿ ಸಲಿಂಗಕಾಮಕ್ಕೆ ಕಾನೂನು ಮಾನ್ಯತೆ ನೀಡಬೇಕೆನ್ನುವ ಹೋರಾಟಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಸಲಿಂಗಕಾಮವನ್ನು...
ನವದೆಹಲಿ: ದೇಶದಲ್ಲಿ ಸಲಿಂಗಕಾಮಕ್ಕೆ ಕಾನೂನು ಮಾನ್ಯತೆ ನೀಡಬೇಕೆನ್ನುವ ಹೋರಾಟಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ತೀರ್ಪಿನ ಪುನರ್ ಪರಿಶೀಲನೆಗೆ ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದೆ. ಡಿ.11 ರಂದು ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಸಲಿಂಗಿಗಳ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಚ್.ಎಲ್. ದತ್ತು, ನ್ಯಾ. ಎಸ್.ಜೆ. ಮುಖ್ಯೋಪಾಧ್ಯಾಯ ಅವರಿದ್ದ ಪೀಠ ತಿರಸ್ಕರಿಸಿದೆ.
'ನಾವು ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದೆವು. ಆದರೆ, ನಮಗೆ ಈ ಹಿಂದಿನ ಆದೇಶದ ವಿಚಾರದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸಕಾರಣ ಸಿಗಲಿಲ್ಲ' ಎಂದು ಈವೇಳೆ ಪೀಠ ತಿಳಿಸಿತು. ಈ ಹಿನ್ನೆಲೆಯಲ್ಲಿ ಇನ್ನು ಕ್ಯುರೇಟಿವ್ ಅರ್ಜಿ ಸಲ್ಲಿಸುವುದಷ್ಟೇ ಅರ್ಜಿದಾರರ ಮುಂದಿರುವ ಏಕೈಕ ಮಾರ್ಗ. ಸುಪ್ರೀಂಕೋರ್ಟ್ ಈ ಹಿಂದೆ ಸಲಿಂಗಕಾಮವನ್ನು ಅಪರಾಧ ಎಂದು ಸಾರುವ ಹಾಗೂ ಜೀವಾವಧಿ ವರೆಗಿನ ಶಿಕ್ಷೆಗೆ ಅವಕಾಶ ನೀಡುವ ದೆಹಲಿ ಹೈಕೋರ್ಟ್‌ನ 2009ರ ತೀರ್ಪನ್ನು ಎತ್ತಿ ಹಿಡಿದಿತ್ತು. ಜತೆಗೆ, ಸಲಿಂಗಕಾಮವನ್ನು ಕಾನೂನುಬದ್ಧಗೊಳಿಸುವ ನಿರ್ಧಾರವನ್ನು ಸಂಸತ್ತಿನ ವಿವೇಚನೆಗೆ ಬಿಟ್ಟಿತ್ತು.