ಎತ್ತಿನಹೊಳೆ ಯೋಜನೆ ವಿರುದ್ಧ ಮಾನವ ಸರಪಳಿ
ಮಂಗಳೂರು: ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನಿಗದಿಯಾಗಿದ್ದ ಶುಕ್ರವಾರ ಸಹ್ಯಾದ್ರಿ ಸಂರಕ್ಷಣಾ ಸಂಚಯ ಆಶ್ರಯದಲ್ಲಿ ಮಂಗಳೂರಿನಲ್ಲಿ ಕರಾಳದಿನ ಆಚರಿಸಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಸುಮಾರು 17ಕ್ಕೂ ಅಧಿಕ ಸಂಘಟನೆಗಳು ಎತ್ತಿನಹೊಳೆ ಯೋಜನೆ ಜಾರಿ ವಿರುದ್ಧ ಪುರಭವನ ಎದುರು ಮಾನವ ಸರಪಳಿ ನಿರ್ಮಿಸಿದರು. ತೋಳಿಗೆ ಕಪ್ಪು ಪಟ್ಟಿ ಧರಿಸಿ ಒಂದು ಗಂಟೆ ಕಾಲ ಮಾನವ ಸರಪಳಿ ನಿರ್ಮಿಸಿದರು. ಯಾವುದೇ ಕಾರಣಕ್ಕೂ ಯೋಜನೆ ಕಾರ್ಯಗತಗೊಳಿಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಫೆ.24ರಂದು ಉಳ್ಳಾಲದಲ್ಲಿ ನದಿ ನೀರಿಗಿಳಿದು ಪ್ರತಿಭಟನೆ ನಡೆಸುವುದಾಗಿ ಸಂಚಯ ಸಂಚಾಲಕ ದಿನೇಶ್ ಹೊಳ್ಳ ತಿಳಿಸಿದ್ದಾರೆ. ಢ್ಢಟಞ ಮಾತನಾಡಿದ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಬರಪೀಡಿತ ಜಿಲ್ಲೆಗಳಿಗೆ ನೀರು ಹರಿಸಲು ಯೋಜನೆ ಹೆಸರನ್ನು ಬದಲಾಯಿಸಿ ಜನರು ದಿಕ್ಕು ತಪ್ಪಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಮೊದಲು ನೇತ್ರಾವತಿ ತಿರುವು, ನಂತರ ಎತ್ತಿನಹೊಳೆ, ಈಗ ಪ್ರವಾಹ ನೀರನ್ನು ತಿರುಗಿಸುವುದು ಎನ್ನುತ್ತಿದ್ದಾರೆ. ನೀರಿನ ಸ್ವಾತಂತ್ರ್ಯಕ್ಕಾಗಿ ಉಗ್ರ ಹೋರಾಟ ನಡೆಸುವುದಾಗಿ ಹೇಳಿದ ಅವರು, ಈ ವಿಚಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದೇವೆ ಎಂದರು.
ಕರಾವಳಿ ಚಿತ್ರಕಲಾ ಚಾವಡಿ, ಕುದುರೆಮುಖ ವನ್ಯಜೀವಿ ಸಂಘಟನೆ, ರೋಶನಿ ನಿಲಯ ವಿದ್ಯಾರ್ಥಿಗಳು, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಇತರೆ ಸಂಘಟನೆಗಳು ಇದ್ದವು.