ಇಂದು ದೆಹಲಿಗೆ ಸಿಎಂ, ಪರಮೇಶ್ವರ
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ. ಎ.ಕೆ.ಆಂಟನಿ ನೇತೃತ್ವದ ಸಮಿತಿ ಜತೆ ಈ ಬಗ್ಗೆ ಚರ್ಚೆ ನಡೆಯಲಿದ್ದು, ಸಿದ್ದರಾಮಯ್ಯ ಹಾಗೂ ಪರಮೇಶ್ವರ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತೀಕಟ್ಟಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರು ಸಾಥ್ ನೀಡಲಿದ್ದಾರೆ. ನಂತರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಜತೆ ಚರ್ಚೆ ನಡೆಯಲಿದೆ.