ಜಿಎಸ್ಟಿಗೆ ಬೆಂಬಲ
ನವದೆಹಲಿ: ಕೇಂದ್ರ ಸರ್ಕಾರದ ಉದ್ದೇಶಿತ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೆ ಕರ್ನಾಟಕ ಸರ್ಕಾರ ಬೆಂಬಲ ಸೂಚಿಸಿದೆ. ಜತೆಗೆ ಹೊಸ ತೆರಿಗೆ ಪದ್ಧತಿಯನ್ನು ಕಾಲಮಿತಿಯೊಳಗೆ ಜಾರಿ ಮಾಡಬೇಕೆಂದೂ ಒತ್ತಾಯಿಸಿದೆ. ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಪುನಾ ಪರಿಷ್ಕೃತ ಸಂವಿಧಾನ ತಿದ್ದುಪಡಿಗೆ ತನ್ನ ಬೆಂಬಲ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರವು ಕೆಲವು ಮಾರ್ಪಾಡುಗಳಿಗೂ ಒತ್ತಾಯಿಸಿದೆ.