ಶಾಸಕ, ಬೆಂಬಲಿಗರು ಪರಾರಿ
ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಆರೋಪಿಗಳಾದ ಶಾಸಕ ವಿಜಯಾನಂದ ಕಾಶಪ್ಪನವರ್...
ಬೆಂಗಳೂರು: ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಆರೋಪಿಗಳಾದ ಶಾಸಕ ವಿಜಯಾನಂದ ಕಾಶಪ್ಪನವರ್, ರೌಡಿ ಸೋಮಶೇಖರ್ ಗೌಡ ಹಾಗೂ ಬೆಂಬಲಿಗರು ತಲೆಮರೆಸಿಕೊಂಡಿದ್ದಾರೆ. ಬಂಧನ ಭೀತಿ ಎದುರಿಸುತ್ತಿರುವ ಶಾಸಕ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಕಬ್ಬನ್ಪಾರ್ಕ್ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ತೀವ್ರಗೊಳಿಸಿದೆ. ಕಬ್ಬನ್ಪಾರ್ಕ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಪ್ರತಿಯನ್ನು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ಪೇದೆ ಕಿರಣ್ ಕುಮಾರ್ ನೀಡಿರುವ ದೂರಿನ ಪ್ರತಿ ಲಭ್ಯವಾಗಿದೆ.