ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಾಶಪ್ಪನವರ ಸೆರೆಗೆ ವಿಳಂಬ

ಪೊಲೀಸ್ ಪೇದೆಗಳ ಮೇಲೆ ಹಲ್ಲೆ ಮಾಡಿದ ಶಾಸಕ ವಿಜಯಾನಂದ ಕಾಶಪ್ಪನರವ ಅವರನ್ನು ಏಕೆ ಬಂಧಿಸಿಲ್ಲ ಎಂಬುದಕ್ಕೆ..

Rashmi Kasaragodu
Updated On : 7 Jul 2014, 1:05 am

ಬಳ್ಳಾರಿ: ಪೊಲೀಸ್ ಪೇದೆಗಳ ಮೇಲೆ ಹಲ್ಲೆ ಮಾಡಿದ ಶಾಸಕ ವಿಜಯಾನಂದ ಕಾಶಪ್ಪನರವ ಅವರನ್ನು ಏಕೆ ಬಂಧಿಸಿಲ್ಲ ಎಂಬುದಕ್ಕೆ ಸರ್ಕಾರ ಸೂಕ್ತ ಉತ್ತರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಬಳ್ಳಾರಿಯಲ್ಲಿ ಭಾನುವಾರ ನಡೆದ ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಕಾಶಪ್ಪನವರ ಹಲ್ಲೆ ನಡೆಸಿ ಇಷ್ಟು ದಿನವಾದರೂ ಬಂಧಿಸದಿರಲು ಕಾರಣವೇನು? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಕ್ರಮ ಚಟುವಟಿಕೆ ಅಧಿಕವಾಗಿವೆ. ಹೈಟೆಕ್ ಪದ್ಧತಿಯಲ್ಲಿ ಮಟಕಾ, ಓಸಿ ದಂಧೆಗಳು ನಡೆಯುತ್ತಿವೆ.
ಅಧಿಕಾರಿಗಳ ವರ್ಗಾವಣೆಯಲ್ಲೂ ಅಕ್ರಮ ನಡೆದಿದೆ. ಇದರಿಂದಾಗಿಯೇ ಪೊಲೀಸ್ ಇಲಾಖೆ ನೈತಿಕತೆ ಕಳೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ. ಜಿಲ್ಲೆಗಳ  ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳ ಬರ ನಿರ್ವಹಣೆಯಲ್ಲಿ ತೊಡಗಿಲ್ಲ. ಬರದ ಹೆಸರಿನಲ್ಲಿ ಹಣ ವೆಚ್ಚ ಮಾಡುತ್ತಿದ್ದರೂ ಕೆಲಸಗಳಾಗುತ್ತಿಲ್ಲ. ವಿದ್ಯುತ್ ಸಮಸ್ಯೆ ಬಿಗಡಾಯಿಸುತ್ತಿದ್ದು, ಇಂಧನ ಸಚಿವ ಡಿಕೆಶಿ ಪರಿಹಾರಕ್ಕೆ ದೇವರ ಮೊರೆ ಹೋಗಿರುವುದು ಹಾಸ್ಯಾಸ್ಪದ ಎಂದರು. ಜು. 12 ಮತ್ತು 13ರಂದು ಮೈಸೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಜರುಗಲಿದೆ. ಶಿವಮೊಗ್ಗ, ಬಳ್ಳಾರಿ, ಗ್ರಾಮೀಣ, ಚಿಕ್ಕೋಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಎಂದರು.

ಹೊರಟ್ಟಿ ಟೀಕೆ
ಗದಗ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಕರಣ ಎರಡು ದಿನ ಸದನದ ಕಲಾಪ ಹಾಳು ಮಾಡಿದ್ದು, ಕೋಟ್ಯಂತರ ರುಪಾಯಿ ನಷ್ಟ ಆಗಿದೆ. ಶಾಸಕರಾಗಲಿ, ಸಾಮಾನ್ಯ ಜನರಾಗಲಿ ಕಾನೂನಿಗೆ ಗೌರವ ನೀಡಬೇಕು. ಕಾಶಪ್ಪನವರ ತಪ್ಪು ಮಾಡಿದ್ದಲ್ಲಿ ಅವರಿಗೆ ಶಿಕ್ಷೆಯಾಗಲಿ, ಆದರೆ ಬಿಜೆಪಿ ಈ ವಿಚಾರವಾಗಿ ಸದನದ ಸಮಯ ಹಾಳು ಮಾಡಿದ್ದು ಸರಿಯಲ್ಲ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. 



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement