ಸ್ಥಾವರ ಕಾಮಗಾರಿ ನಿಲ್ಲದು
ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ದುರದೃಷ್ಟಕರ. ಆದರೆ...
ಬಸವನಬಾಗೇವಾಡಿ: ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ದುರದೃಷ್ಟಕರ. ಆದರೆ, ಈ ಸ್ಥಾವರ ನಿರ್ಮಾಣ ಕಾರ್ಯ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ಪ್ರತಿಭಟನಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರೊಂದಿಗೆ ಚರ್ಚಿಸಿಯೇ ಈ ಸ್ಥಾವರ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ. ಅವರ ಕೆಲ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಶೀಘ್ರದಲ್ಲೇ ರೈತರ ಸಭೆ ಕರೆದು ಚರ್ಚಿಸಲಾಗುವುದು. ಶನಿವಾರದ ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ. ಪ್ರತಿಭಟನಾಕಾರರು ಕಾನೂನು ಕೈಗೆ ತೆಗೆದುಕೊಂಡಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಬೇಕಾಯಿತು ಎಂದು ಸಮರ್ಥನೆ ನೀಡಿದರು.