ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮುಂದಿನ ಬಾರಿ ಪರಮೇಶ್ವರ್ ನೇತೃತ್ವದಲ್ಲಿ ಸರ್ಕಾರ

ಮುಂದಿನ ಬಾರಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ಸಮಾಜ ...

Rashmi Kasaragodu
Updated On : 8 Jul 2014, 1:19 am

ವಿಧಾನ ಪರಿಷತ್ತು: ಮುಂದಿನ ಬಾರಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ರಾಮಚಂದ್ರಗೌಡರ ಪ್ರಶ್ನೆಗೆ ಉತ್ತರಿಸಿದ ಆಂಜನೇಯ, ವಸತಿ ಶಾಲೆಗಳ ಸಮಸ್ಯೆಗಳನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಪರಿಹರಿಸಲಾಗುವುದು. ಮುಂದಿನ ಅವಧಿಗೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದರು. ಆಗ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಯಾರ ನೇತೃತ್ವದಲ್ಲಿ ಅಧಿಕಾರ ಹಿಡಿಯುತ್ತೀರಿ ಎಂದು ಪದೇಪದೇ ಕೇಳಿ ತಪ್ಪಿಗೆ ಸಿಲುಕಿಸಲು ಯತ್ನಿಸಿದರು. ಜಾಗ್ರತರಾದ ಆಂಜನೇಯ, ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ಹೀಗಾಗಿ ಅವರ ನೇತೃತ್ವದಲ್ಲಿ ಅಧಿಕಾರ ಹಿಡಿಯುತ್ತೇವೆ. ಅದೇರೀತಿ ನೀವು ಪಕ್ಷದ ಅಧ್ಯಕ್ಷರಾಗಿದ್ದರೆ ನಿಮ್ಮ ನೇತೃತ್ವದಲ್ಲಿ ನಿಮ್ಮ ಪಕ್ಷ ಚುನಾವಣೆ ಎದುರಿಸುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement