ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸದನದಲ್ಲಿ ಅತ್ಯಾಚಾರ ಪ್ರತಿಧ್ವನಿ, ಇಂದು ಸರ್ಕಾರದ ಹೇಳಿಕೆ

Vishwanath S
Updated On : 17 Jul 2014, 12:34 pm

ವಿಧಾನಸಭೆ: ಬೆಂಗಳೂರಿನ ಫ್ರೇಜರ್‌ಟೌನ್‌ನ ಯುವತಿ ಅತ್ಯಾಚಾರ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮಹಿಳಾ ದೌರ್ಜನ್ಯ ತಡೆ ಸಮಿತಿ ರಚಿಸಲು ಮುಂದಾಗಿರುವ ಸರ್ಕಾರ ಗುರುವಾರ ಪ್ರತ್ಯೇಕ ಹೇಳಿಕೆ ನೀಡಲು ನಿರ್ಧರಿಸಿದೆ.
ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಉತ್ತರ ನೀಡಿದ ಗೃಹ ಸಚಿವ ಕೆ.ಜೆ.ಜಾರ್ಜ್ ಘಟನೆ ನಡೆದಿರುವುದು ನಿಜ. ಯುವತಿ ದೂರಿನನ್ವಯ ಆರೋಪಿ ನಾಸೀರ್ ಹೈದರ್‌ನನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳದ ಇನ್‌ಸ್ಪೆಕ್ಟರ್ ಅಮಾನತುಗೊಳಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ನಾಲ್ಕು ತಂಡ ರಚಿಸಲಾಗಿದೆ ಎಂದರು.
ಆದರೆ ಇದಕ್ಕೆ ಒಪ್ಪದ ಬಿಜೆಪಿ ಸದಸ್ಯರು, ರಾಜ್ಯದಲ್ಲಿ ಪದೇಪದೆ ಇಂಥ ಪ್ರಕರಣಗಳು ನಡೆಯುತ್ತಿವೆ. 6 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಬೇಕು ಎಂದು ಪಟ್ಟು ಹಿಡಿದರು. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರಂತೂ ಜಾರ್ಜ್ ವೈಯಕ್ತಿಕವಾಗಿ ಒಳ್ಳೆಯವರಿರಬಹುದು. ಆದರೆ ಪೊಲೀಸ್ ಇಲಾಖೆಯನ್ನು ನಿಭಾಯಿಸುವಲ್ಲಿ ಅವರು ವಿಫಲರಾಗುತ್ತಿದ್ದಾರೆ. ಮುಖ್ಯಮಂತ್ರಿ ಮಧ್ಯಪ್ರವೇಶದಿಂದ ಅವರಿಗೆ ಕಷ್ಟವಾಗುತ್ತಿರಬಹುದು. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಇದಕ್ಕೆ ಆಡಳಿತ ಪಕ್ಷದ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಯಿತು.
ವಿಶೇಷ ಕೋರ್ಟ್ ಸ್ಥಾಪಿಸಿ
ಬೆಂಗಳೂರು:
ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರಣೆಗಾಗಿ, ಲೈಂಗಿಕ ದೌರ್ಜಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಸ್ಕೋ)ಯ ಅನ್ವಯ ರಾಜ್ಯ ಸರ್ಕಾರ ಶೀಘ್ರ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕೆಂದು ಸಂಸದ ರಾಜೀವ್ ಚಂದ್ರಶೇಖರ್ ಒತ್ತಾ ಯಿಸಿದ್ದಾರೆ.  ವರ್ತೂರಿನಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ತೀವ್ರ ಖಂಡಿಸಿರುವ ರಾಜೀವ್, ಆರೋಪಿ ಹಾಗೂ ಶಾಲೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
 ಕಠಿಣ ಕ್ರಮ- ಮುಖ್ಯಮಂತ್ರಿ
ಅತ್ಯಾಚಾರದಂಥ ಅಮಾನವೀಯ ಘಟನೆಯನ್ನು ನೋಡಿಕೊಳ್ಳುತ್ತಾ ಕುಳಿತುಕೊಳ್ಳುವುದಿಲ್ಲ, ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಭರವಸೆ ನೀಡಿದರು. ಬಿಜೆಪಿಯ ಕೆ.ಜಿ.ಬೋಪಯ್ಯ ಆರೋಪಕ್ಕೆ ಉತ್ತರಿಸಿದ ಅವರು, ಸರ್ಕಾರ ಇಂಥ ಘಟನೆಗಳನ್ನು ಹತ್ತಿಕ್ಕಿ, ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ. ಅಧಿಕಾರಿಗಳ ಲೋಪವನ್ನೂ ಸಹಿಸುವುದಿಲ್ಲ. ಸರ್ಕಾರ ಯಾರ ರಕ್ಷಣೆಯನ್ನೂ ಮಾಡುತ್ತಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement