ವಿಬ್ಗಯಾರ್ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲೆಗೆ ಸೂಚನೆ
ಆರು ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ..
ಬೆಂಗಳೂರು: ಆರು ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ವಿಬ್ಗಯಾರ್ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಗೃಹ ಸಚಿವ ಕೆ.ಜೆ ಜಾರ್ಜ್ ಸೂಚಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಕೆ.ಜೆ ಜಾರ್ಜ್, ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಶಾಲಾ ಆಡಳಿತ ಮಂಡಳಿ ತಪ್ಪು ಸಾಬೀತಾಗಿದ್ದು, ಶಾಲೆಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಭಾಗಿಯಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದ ಅವರು ವಿದ್ಯಾರ್ಧಿನಿ ಬುದ್ಧಿಮಾಂದ್ಯಳಲ್ಲ, 1ನೇ ತರಗತಿಯ ವಿದ್ಯಾರ್ಥಿನಿ ಬಹಳ ಚುರುಕಾಗಿದ್ದಳು ಎಂದು ಜಾರ್ಜ್ ತಿಳಿಸಿದ್ದಾರೆ.