ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಇಬ್ಬರ ಸೆರೆ
ಮೂಲ್ಕಿ: ಕೆಮ್ರಾಲ್ ಫ್ರೌಢಶಾಲೆಯ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಪಾದಚಾರಿ, 10ನೇ ತರಗತಿ ವಿದ್ಯಾರ್ಥಿನಿಯನ್ನು ತಡೆದು ನಿಲ್ಲಿಸಿ ಅಶ್ಲೀಲವಾಗಿ ವರ್ತಿಸಿ ಮಾನಸಿಕ ಕಿರುಕುಳ ನೀಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಶಾಂತ್ ಮತ್ತು ಪ್ರಣೀತ್ ಬಂಧಿತರು. ಇನ್ನಿಬ್ಬರು ಆರೋಪಿಗಳು ತಲೆ ಮರೆಸಿದ್ದಾರೆ. ಕಿರುಕುಳ ನೀಡಿದ ಆರೋಪಿಗಳಾದ ಪ್ರಶಾಂತ್, ಪ್ರಣೀತ್, ಭರತ್ ಮತ್ತು ಗೌತಮ್ ವಿರುದ್ಧ ಮೂಲ್ಕಿ ಠಾಣೆಗೆ ಯುವತಿ ದೂರು ನೀಡಿದ್ದಳು. ಮೂಲ್ಕಿ ಠಾಣಾಧಿಕಾರಿ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ತನಿಖೆ ನಡಸಿದ ಮೂಲ್ಕಿ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ಆ.5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಶನಿವಾರ ಪ್ರಕರಣ ನಡೆದಿದ್ದು, ಭಾನುವಾರ ಕೇಸು ದಾಖಲಾಗಿತ್ತು.