ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಾಲಾರೋಪಿ ವಯಸ್ಸು ಇಳಿಕೆ?

Vishwanath S
Updated On : 23 Jul 2014, 12:51 pm

ನವದೆಹಲಿ: ಕೇಂದ್ರ ಸರ್ಕಾರ ಶೀಘ್ರವೇ ಬಾಲಾಪರಾಧಿಗಳ ವಯೋವುತಿ ಇಳಿಕೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಸೂಚಿಸಿರುವ ಪ್ರಮುಖ ತಿದ್ದುಪಡಿಗಳಿಗೆ ಅಂಗೀಕಾರ ನೀಡುವುದು ಬಹುತೇಕ ಖಚಿತವಾಗಿದೆ. ದೆಹಲಿಯಲ್ಲಿ ನಿರ್ಭಯಾ ಹತ್ಯಾಚಾರ ಮತ್ತು ದೇಶದ ಇತರ ಸ್ಥಳಗಳಲ್ಲಿ ನಂತರ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಲೈಂಗಿಕ ಹಲ್ಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಬಾಲಾಪರಾಧಿಗಳ ವಯೋವುತಿ ಕಡಿಮೆಗೊಳಿಸಬೇಕು ಎಂಬ ಬಗ್ಗೆ ಹಲವು ಹಂತಗಳಲ್ಲಿ ಒಕ್ಕೊರಲ ಆಗ್ರಹ ಕೇಳಿ ಬಂದಿತ್ತು.
ಅದಕ್ಕೆ ಪೂರಕವಾಗಿ ಕೇಂದ್ರದ ಹಾಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಕೂಡ ಹಲವು ಸಂದರ್ಭಗಲ್ಲಿ ಶೇ.50ರಷ್ಟು ಅತ್ಯಾಚಾರ ಪ್ರಕರಣಗಳಲ್ಲಿ 16 ವರ್ಷ ವಯಸ್ಸಿನ ಮಕ್ಕಳು ಭಾಗಿಯಾಗುತ್ತಿದ್ದಾರೆ. ಹೀಗಾಗಿ ಕಾನೂನಿನಲ್ಲಿ ತಿದ್ದುಪಡಿಯಾಗಬೇಕೆಂದು ಅವರು ಪ್ರತಿಪಾದಿಸಿದ್ದರು.
ಇದಕ್ಕೆಲ್ಲ ಕಳಶವಿಟ್ಟಂತೆ ಸುಪ್ರೀಂಕೋರ್ಟ್ ಕೂಡ ಬಾಲಪರಾಧಿಗಳ ವಿಚಾರದಲ್ಲಿ ಕಾನೂನು ಬದಲಾಗಬೇಕು. ಸರ್ಕಾರಿ ಉದ್ಯೋಗದಲ್ಲಿ ವಯೋವುತಿಯಲ್ಲಿ ಸಡಿಲಿಕೆ ಇದ್ದಂತೆ ಗಂಭೀರ ಅಪರಾಧ ಪ್ರಕರಣಗಳಲ್ಲಿ ಬಾಲಾಪರಾಧಿಗಳಿಗೆ ರಿಯಾಯಿತಿ ಇರಬಾರದು ಎಂದು ಅಭಿಪ್ರಾಯಪಟ್ಟಿತ್ತು.
ಲೋಕಸಭೆಯಲ್ಲಿ ಪ್ರಸ್ತಾಪ: ಅದಕ್ಕೆ ಪೂರಕವಾಗಿ ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಾನೂನು ಬದಲಿಗೆ ಸರ್ಕಾರ ಸಿದ್ಧವಿದೆ. ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಕೂಡ ಗಮನ ಹರಿಸಬೇಕಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement