ನವ ನಿರ್ಮಾಣ ಸೇನೆ ಕಾರ್ಯಕರ್ತರ ಬಂಧನ, ಬಿಡುಗಡೆ
ಬೆಳಗಾವಿಯ ಯಳ್ಳೂರಿನಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್...
ಬೆಂಗಳೂರು: ಬೆಳಗಾವಿಯ ಯಳ್ಳೂರಿನಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್ ಕಾರ್ಯಕರ್ತರನ್ನು ಗೂಂಡಾ ಕಾಯ್ದೆ ಅನ್ವಯ ಬಂಧಿಸುವಂತೆ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮನವಿ ಸಲ್ಲಿಸಲು ಹೋಗಿದ್ದ ನವ ನಿರ್ಮಾಣ ಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಸೇನೆ ಅಧ್ಯಕ್ಷ ಭೀಮಾಶಂಕರ್ ಪಾಟೀಲ್ ಸೇರಿದಂತೆ ಏಳೆಂಟು ಕಾರ್ಯಕರ್ತರು ಶನಿವಾರ ಸಂಜೆ ಶೇಷಾದ್ರಿಪುರದ ಗೃಹ ಸಚಿವರ ನಿವಾಸಕ್ಕೆ ಆಗಮಿಸಿದ್ದರು. ಸಚಿವರು ಮನೆಯಲ್ಲಿಲ್ಲ ಅಮೇಲೆ ಬನ್ನಿ ಎಂದು ಸಚಿವರ ಆಪ್ತ ಸಹಾಯಕರು ಹೇಳಿ ಕಳುಹಿಸಿದ್ದಾರೆ.
ಹೀಗಾಗಿ ಸಂಜೆ 5.30ರ ಸುಮಾರಿಗೆ ಸೇನೆ ಕಾರ್ಯಕರ್ತರು ಮನೆ ಬಳಿ ಬರುತ್ತಿದ್ದಂತೆ ಪೊಲೀಸರು ಬಂಧಿಸಿ ರಾತ್ರಿ 10 ಗಂಟೆ ಸುಮಾರಿಗೆ ಬಿಡುಗಡೆ ಮಾಡಿದ್ದಾರೆ.